ತೆರಿಗೆ ವಂಚನೆ ಆರೋಪದ ಅರ್ಜಿ ವಜಾ, ರು. 30 ಸಾವಿರ ದಂಡ
ಬೆಂಗಳೂರು: ನಗರ ಪಾಲಿಕೆಗಳು ತೆರಿಗೆ ಸಂಗ್ರಹಣೆ ಪ್ರಕ್ರಿಯೆಯಲ್ಲಿ ಜನರನ್ನು ವಂಚಿಸುತ್ತಿವೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಅರ್ಜಿದಾರರಿಗೆ 30 ಸಾವಿರ ದಂಡ ವಿಧಿಸಿದೆ.
ಮಂಗಳೂರಿನ ಪಾಲಿಕೆಯ ತೆರಿಗೆ ಸಂಗ್ರಹಣೆ ಪ್ರಕ್ರಿಯೆಗೆ ಆಕ್ಷೇಪ ವ್ಯಕ್ತಪಡಿಸಿ ವಿನಾಯಕ ಬಾಳಿಗ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಆಸ್ತಿ ತೆರಿಗೆ ಕಾಯ್ದೆ ಅನುಸಾರ, ಪಾಲಿಕೆಗಳು ತೆರಿಗೆ ಸಂಗ್ರಹಣೆಗೆ ಮುನ್ನ ವಿಶೇಷ ಮಂಡಳಿಯನ್ನು ರಚಿಸಬೇಕು. ಅದರ ಮೂಲಕವೇ ತೆರಿಗೆಯನ್ನು ಸಂಗ್ರಹಿಸಬೇಕು. ಆದರೆ, ಯಾವುದೇ ಪಾಲಿಕೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು. ಆದರೆ, ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿಯಿಲ್ಲ. ತೆರಿಗೆ ಸಂಗ್ರಹಣೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬುದಕ್ಕೆ ಅರ್ಜಿಯಲ್ಲಿ ಯಾವುದೇ ಪುರಾವೆಗಳನ್ನು ಒದಗಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ, ಅನಗತ್ಯ ಅರ್ಜಿಯ ಮೂಲಕ ನ್ಯಾಯಾಲಯದ ಸಮಯ ವ್ಯಯಮಾಡಿದ್ದಕ್ಕಾಗಿ 30 ಸಾವಿರ ದಂಡ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

