ದಕ್ಷಿಣ ಕನ್ನಡ

ಅಂಚೆ ಕಡತಗಳು ಬೆಂಕಿಗಾಹುತಿ

Published On :

ಮಂಗಳೂರು: ಜಿಲ್ಲಾಧಿಕಾರಿ ಕಚೇರಿ ಕಟ್ಟದಲ್ಲಿರುವ ಅಂಚೆಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡು ಕಡತಗಳು ಸುಟ್ಟು ಹೋಗಿವೆ. ಒಂದನೇ ಮಹಡಿಯಲ್ಲಿರುವ ಅಂಚೆ ಕಚೇರಿಗೆ ಮಧ್ಯಾಹ್ನ 12.15ಕ್ಕೆ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ತಕ್ಷಣ ಸ್ಥಳಕ್ಕೆ ಆಗಮಿಸಿದರು. ಕಡತಗಳಿಗೆ ಬೆಂಕಿ ಹಬ್ಬಿ ಕಚೇರಿ ಒಳಗೆ ಹೊಗೆ ದಟ್ಟವಾಗಿ ಹರಡಿತ್ತು. ಅಗ್ನಿಶಾಮಕ ದಳ ಅಧಿಕಾರಿಗಳು ಬೆಂಕಿ ನಂದಿಸಿದರು. ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹಬ್ಬಿದ ಬಗ್ಗೆ ಕುರುಹು ಸಿಕ್ಕಿಲ್ಲ. ಡಸ್ಟ್ ಬಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಟೇಬಲ್‌ಗೆ ಹಬ್ಬಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.