ಮತದಾರರ ಪಟ್ಟಿಯಲ್ಲಿ 2 ನೋಂದಾವಣೆ ದೂರು ಬಂದಲ್ಲಿ ಮೊಕದ್ದಮೆ: ಪ್ರಸನ್ನ
ಪುತ್ತೂರು: ಮತದಾರರ ಪಟ್ಟಿಯಲ್ಲಿ ಉದ್ದೇಶಪೂರ್ವಕವಾಗಿ ಎರಡು ಕಡೆ ಹೆಸರು ನೋಂದಾವಣೆ ಮಾಡಿಕೊಂಡಿರುವ ಬಗ್ಗೆ ದೂರು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಎಚ್. ಪ್ರಸನ್ನ ಎಚ್ಚರಿಸಿದ್ದಾರೆ.
ಪುತ್ತೂರಿನಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮತಪಟ್ಟಿಯಲ್ಲಿ ಪರಿಷ್ಕರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಯನ್ನು ಈಗಲೇ ಪರಿಶೀಲಿಸಿ ತಮ್ಮ ಹೆಸರು ಇರುವುದು ಖಾತ್ರಿಪಡಿಸಿಕೊಳ್ಳಬೇಕಾಗಿದೆ. ಮುಂದೆ ಚುನಾವಣೆಯ ಸಮಯದಲ್ಲಿ ಪರಿಷ್ಕರಣೆಗೆ ಯಾವುದೇ ಅವಕಾಶ ಇರುವುದಿಲ್ಲ. ಗುರುತು ಚೀಟಿ ಇದ್ದರೂ ಉಪಯೋಗಕ್ಕೆ ಬಾರದು ಎಂದ ಅವರು ಈ ಹಿನ್ನೆಲೆಯಲ್ಲಿ ಏ.7 ರ ಒಳಗಾಗಿ ಸ್ಥಳೀಯ ಪಂಚಾಯಿತ್,ನಲ್ಲಿ ಅಥವಾ ಆನ್,ಲೈನ್,ನಲ್ಲಿ ಪರಿಶೀಲನೆ ಮಾಡಬಹುದಾಗಿದೆ ಎಂದರು.
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕಂಡುಬಂದರೆ ನೇರವಾಗಿ ಚುನಾವಣಾ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಬಹುದು. ಪುತ್ತೂರಿನಲ್ಲಿ 24 ಗಂಟೆ ಕಂಟ್ರೋಲಲ್ರೂಂ ಚಾಲನೆಯಲ್ಲಿರುತ್ತದೆ. ಪುತ್ತೂರಿಗೆ ಸಂಬಂಧಿಸಿ 08251-231357 ಹಾಗೂ ಜಿಲ್ಲಾ ಮಟ್ಟದಲ್ಲಿ 1077 ದೂರವಾಣಿ ಸಂಖ್ಯೆ ಚಾಲನೆಯಲ್ಲಿರುತ್ತದೆ. ಯಾವುದೇ ಮಾಹಿತಿಗೂ ಕರೆ ಮಾಡಬಹುದು ಎಂದು ತಿಳಿಸಿದರು.
ಪುತ್ತೂರು ವಿಧಾನಸಭಾ ವ್ಯಾಪ್ತಿಯಲ್ಲಿ 208 ಮತಗಟ್ಟೆಗಳಿದ್ದು, ಈ ಪೈಕಿ 7 ಅತಿಸೂಕ್ಷ್ಮ , 47 ಸೂಕ್ಷ್ಮ ಹಾಗೂ 154 ಸಾಮಾನ್ಯ ಮತಗಟ್ಟೆಗಳಿವೆ. ಮತದಾರರ ಪಟ್ಟಿಯಂತೆ 89,252 ಪುರುಷರು ಮತ್ತು 85,456 ಮಹಿಳೆಯರು ಸೇರಿದಂತೆ ಒಟ್ಟು 174717 ಮತದಾರರಿದ್ದಾರೆ ಎಂದರು.
ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 17 ಸೆಕ್ಟರ್ ಆಫೀಸರ್ಸ್ಗಳನ್ನು ನೇಮಿಸಲಾಗಿದ್ದು, ಇವರಿಗೆ 10ರಿಂದ 14 ಮತಗಟ್ಟೆಗಳ ಮೇಲ್ವಿಚಾರಣೆ ವಹಿಸಲಾಗಿದೆ. 6 ಜನ ಸೆಕ್ಟರ್ಸ್ ಅಧಿಕಾರಿಗಳಿಗೆ ಒಬ್ಬರಂತೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಸೆಕ್ಟರಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ತಹಸೀಲ್ದಾರ್ ಕುಳ್ಳೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

