ಕಾರ್ಮಿಕರ ದಿಕ್ಕು ತಪ್ಪಿಸುವ ಕಾಂಗ್ರೆಸ್; ಆರೋಪ
ಸುಳ್ಯ: ತಮಿಳು ಕಾರ್ಮಿಕರಿಗಾಗಿ ಏನೂ ಮಾಡದ ಕಾಂಗ್ರೆಸ್ ಚುನಾವಣೆ ಬರುತ್ತಿದ್ದಂತೆ ಕಾರ್ಮಿಕರ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಇದರಿಂದ ಬಿಜೆಪಿಯನ್ನು ಸೋಲಿಸುತ್ತೇವೆಂಬ ಭ್ರಮೆ ಬೇಡ ಎಂದು ಬಿಜೆಪಿ ಬೆಂಬಲಿತ ತಮಿಳು ಕಾರ್ಮಿಕ ಮುಖಂಡರು ಹೇಳಿದ್ದಾರೆ.
ಸುಳ್ಯದ ಕೇರ್ಪಳ ಶ್ರೀ ದುರ್ಗಾ ಪರಮೇಶ್ವರಿ ಕಲಾಮಂದಿರದಲ್ಲಿ ಬುಧವಾರ ನಡೆದ ಬಿಜೆಪಿ ಬೆಂಬಲಿತ ತಮಿಳು ರಬ್ಬರ್ ಕಾರ್ಮಿಕರ ಸಮಾವೇಶದಲ್ಲಿ ಅವರು ಮಾತನಾಡಿದರು.
ವಿವಿಧ ಬೇಡಿಕೆಗಳನ್ನು ಮುಂದಿರಿಸಿ ತಮಿಳು ಕಾರ್ಮಿಕರ ಇನ್ನಿತರ ಕೆಲವು ಸಂಘಟನೆಗಳು ಸುಳ್ಯ ತಾಲೂಕು ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಮತ್ತು ಇತ್ತೀಚೆಗೆ ನಡೆಸಿದ ತಾಲೂಕು ಕಚೇರಿ ಮುತ್ತಿಗೆಗೆ ಪ್ರತಿಯಾಗಿ ಬಿಜೆಪಿ ಈ ಸಮಾವೇಶ ಹಮ್ಮಿಕೊಂಡಿತ್ತು.
ತಮಿಳು ಕಾರ್ಮಿಕರನ್ನು ಗುರುತಿಸಿ ಅವರಿಗೆ ಎಲ್ಲ ಅವಕಾಶ ಮತ್ತು ಅಧಿಕಾರವನ್ನು ನೀಡಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್ ಅಲ್ಲ. ಬಿಜೆಪಿಯಲ್ಲಿ ಎಲ್ಲ ಅಧಿಕಾರವನ್ನು ಅನುಭವಿಸಿ ಸ್ವಾರ್ಥ ಸಾಧನೆಗಾಗಿ ಕಾಂಗ್ರೆಸ್,ಗೆ ಹೋದ ಚಂದ್ರಲಿಂಗಂ ನಮ್ಮ ವಿರುದ್ಧ ಅಪಪ್ರಚಾರ ನಡೆಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು. ನಮ್ಮನ್ನು ಅಲ್ಲಾಡಿಸಲು ಅವರಿಂದ ಸಾಧ್ಯವಿಲ್ಲ. ನಮ್ಮ ಬೆಂಬಲ ಯಾವತ್ತೂ ಅಂಗಾರ ಮತ್ತು ಬಿಜೆಪಿಗೆ ಎಂದವರು ಹೇಳಿದರು. ಹಿರಿಯ ಕಾರ್ಮಿಕ ಮುಖಂಡರಾದ ಪಿ. ಸುಬ್ರಹ್ಮಣ್ಯಂ, ಕಾಂತಮುತ್ತು, ಜಾನ್ ಬ್ಯಾಪಿಸ್ಟ್ ಸಮಾವೇಶವನ್ನು ಉದ್ಘಾಟಿಸಿದರು.
ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಕೆಎಫ್,ಡಿಸಿ ಅಧ್ಯಕ್ಷ ಎಸ್.ಎನ್. ಮನ್ಮಥ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ವಿ. ತೀರ್ಮರಾಮ, ಕಾರ್ಮಿಕ ಮುಖಂಡರಾದ ಪಿ. ಸುಪ್ಪಯ್ಯ ಬೇಂಗಮಲೆ, ದಯಾಳನ್ ಬಾರ್ಪಣೆ, ತಂಗವೇಲು ನಾಗಪಟ್ಟಣ, ಎಂ. ಸುಂದರ ಲಿಂಗಂ ಮೊದಲಾದವರು ಮಾತನಾಡಿದರು. ಸಮಾವೇಶ ಸಮಿತಿ ಗೌರವಾಧ್ಯಕ್ಷ, ಜಿ.ಪಂ. ಸದಸ್ಯ ನವೀನ್ ಕುಮಾರ್ ಮೇನಾಲ, ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಕೃಷ್ಣ ಶೆಟ್ಟಿ ಕಡಬ, ಕೋಶಾಧಿಕಾರಿ ಪ್ರಕಾಶ್ ಹೆಗ್ಡೆ, ತಾಪಂ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ನಗರ ಬಿಜೆಪಿ ಅಧ್ಯಕ್ಷ ಪಿ.ಕೆ. ಉಮೇಶ್ ಇದ್ದರು. ಸಮಾವೇಶ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಶಂಕರ ಲಿಂಗಂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾವೇಶಕ್ಕೂ ಮೊದಲು ನಗರದಲ್ಲಿ ಮರವಣಿಗೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

