ದಕ್ಷಿಣ ಕನ್ನಡ

ರೆಡ್‌ಕ್ರಾಸ್‌ನಿಂದ 2ಕ್ಕೆ 20 ಲೀ. ನೀರು ಪೂರೈಕೆ ಯೋಜನೆ

Published On :

ಉಡುಪಿ: ಕುಡಿಯುವ ನೀರಿನ ಸಮಸ್ಯೆ ಇರುವ ರಾಜ್ಯದ ನಕ್ಸಲ್ ಪೀಡಿತ ಪ್ರದೇಶ ಮತ್ತು ನಿಮ್ನ ವರ್ಗಗಳ ಕಾಲನಿಗಳಿಗೆ ರು. 2ಕ್ಕೆ 20 ಲೀ. ನೀರು ಪೂರೈಸುವ ಯೋಜನೆಯೊಂದನ್ನು ಭಾರತೀಯ ರೆಡ್‌ಕ್ರಾಸ್ ಸೊಸೈಟಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ರೆಡ್‌ಕ್ರಾಸ್ ಸೊಸೈಟಿ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಘೋಷಿಸಿದ್ದಾರೆ.
ರೆಡ್‌ಕ್ರಾಸ್ ಸೊಸೈಟಿಯ ರಾಜ್ಯ ಸಭಾಪತಿಯಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ರೆಡ್‌ಕ್ರಾಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬ್ಲಡ್ ಬ್ಯಾಂಕ್ ಸ್ಥಾಪನೆ: ಈಗಾಗಲೇ 10 ಜಿಲ್ಲೆಗಳಲ್ಲಿ ಬ್ಲಡ್ ಬ್ಯಾಂಕ್‌ಗಳನ್ನು ಸ್ಥಾಪಿಸಿಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ 20 ಜಿಲ್ಲೆಗಳಲ್ಲೂ ಸ್ಥಾಪಿಸಲು ನಿರ್ಧರಿಸಲಾಗಿದೆ. ಉಳಿದಂತೆ ಅಪಘಾತ ಸಂಭವಿಸುವ ಪ್ರಮುಖ ಸೆಂಟರ್‌ಗಳಲ್ಲಿ ಟ್ರೋಮಾ ಸೆಂಟರ್‌ಗಳ ಸ್ಥಾಪನೆ, ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸ್ಥಾಪನೆ, ಗ್ರಾಮೀಣ ಮಟ್ಟದ ಮಹಿಳಾ ವಿದ್ಯಾರ್ಥಿಗಳಿಗೆ ಸ್ಯಾನಿಟರ್ ನ್ಯಾಪ್‌ಕಿನ್ ರು. 2ರಂತೆ ವಿತರಣೆ, ಕಾಲೇಜುಗಳಲ್ಲಿ ಯುವ ರೆಡ್‌ಕ್ರಾಸ್ ಘಟಕಗಳನ್ನು ಸ್ಥಾಪಿಸಿ ನಾಯಕತ್ವ, ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆಗಳ ಕುರಿತು ತರಬೇತಿ ನಿಡುವುದು ಇನ್ನಿತರ ಹತ್ತಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಕೆಲವು ಯೋಜನೆಗಳನ್ನು ಈಗಾಗಲೇ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.