ಅಭಿವೃದ್ಧಿಯಾಗದ ರಸ್ತೆ; ಪೆರುವಾಯಿ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ
ವಿಟ್ಲ: ಪೆರುವಾಯಿಯ ತಚ್ಚಮೆ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದು ಪೆರುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.
ಪೆರುವಾಯಿ ಗ್ರಾಮ ಪಂಚಾಯಿತಿಯ ಕೊಲ್ಲತ್ತಡ್ಕ ತಚ್ಚಮೆ ಮಾರ್ಗವಾಗಿ ಸುಣ್ಣಂಬಳಕ್ಕೆ ಸೇರುವ ನಾಲ್ಕು ದಶಕದಷ್ಟು ಹಳೆಯ ರಸ್ತೆಯಾಗಿದೆ.
ಈ ರಸ್ತೆ ಹಲವು ವರ್ಷಗಳಿಂದ ಬೇಸಿಗೆಯಲ್ಲಿ ದೂಳು, ಮಳೆಗಾಲದಲ್ಲಿ ಕೆಸರು ತುಂಬಿರುತ್ತದೆ.
ಎರಡು ವರ್ಷಗಳ ಹಿಂದೆ ಅರ್ಧ ಕಿಲೋ ಮೀಟರ್ನಷ್ಟು ದೂರ ಡಾಮರೀಕರಣವಾಗಿ ಬಳಿಕದ ಎರಡು ಕಿ.ಮೀ. ದೂರ ಕಚ್ಚಾ ರಸ್ತೆಯೇ ಇದೆ.
ಕಳೆದ ವರ್ಷದಿಂದ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಡಾಮರೀಕರಣವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಆದರೆ ಯಾವುದೇ ಡಾಮರೀಕರಣವಾಗಿಲ್ಲ.
ರಸ್ತೆಯು ತಚ್ಚಮೆ ಭಗವತೀ ದೇವಾಲಯವನ್ನು ಸಂಪರ್ಕಿಸುತ್ತಿದ್ದು, ಇಲ್ಲಿ ನಿತ್ಯ ಹಲವಾರು ವಾಹನಗಳು ಸಂಚರಿಸುತ್ತವೆ.
ಆದರೆ, ಇದನ್ನು ನೋಡಿಯೂ ನೋಡದಂತೆ ಜನಪ್ರತಿನಿಧಿಗಳು ಸಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ರಸ್ತೆ ಅಭಿವೃದ್ಧಿಗೆ ಈಗಾಗಲೇ ಸುಮಾರು 5 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಟೆಂಡರ್ ಪ್ರಕ್ರಿಯೆಗೆ ಯಾರೂ ಬರದ ಹಿನ್ನಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ.
ಸದ್ಯ ಗುತ್ತಿಗೆ ಪಡೆದ ವ್ಯಕ್ತಿ ಜಲ್ಲಿ ಹಾಕುವ ಕಾರ್ಯಕ್ಕೆ ತೊಡಗಿದಾಗ ಚುನವಣಾ ನೀತಿ ಸಂಹಿತೆ ಜಾರಿಯಾಗಿದೆ ಎಂದು ಸ್ಥಳೀಯ ನಿವಾಸಿ ಪ್ರಭಾಕರ ಶೆಟ್ಟಿ ಪೆರುವಾಯಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

