ಉಡುಪಿ ಜಿಲ್ಲೆಗೆ 3 ರಾಷ್ಟ್ರೀಯ ಪ್ರಶಸ್ತಿ
ಉಡುಪಿ: ಭಾರತ ಸರ್ಕಾರವು ಪಂಚಾಯತ್ರಾಜ್ ಸಂಸ್ಥೆಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಪಂಚಾಯಿತಿಗಳ ಸಬಲೀಕರಣ ಮತ್ತು ಉತ್ತರದಾಯಿತ್ವ ಪ್ರೋತ್ಸಾಹ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಉತ್ತಮ ಸಾಧನೆ ಮಾಡಿದ ಪಂಚಾಯಿತಿ (ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ)ಸಂಸ್ಥೆಗಳಿಗೆ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿ ಈ ಮೂರು ಪ್ರಶಸ್ತಿಗಳು ಉಡುಪಿ ಜಿಲ್ಲೆಗೆ ಸಂದಿವೆ ಮತ್ತು 3 ಪ್ರಶಸ್ತಿಗಳನ್ನು ಒಂದೇ ಜಿಲ್ಲೆ ಪಡೆದುಕೊಂಡಿರುವುದು ದೇಶದಲ್ಲಿಯೇ ಪ್ರಥಮವಾಗಿದ್ದು, ಒಂದು ದಾಖಲೆಯಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ, 2012- 13ನೇ ಸಾಲಿನ ಈ ಪಂಚಾಯಿತಿಗಳ ಸಬಲೀಕರಣ ಮತ್ತು ಉತ್ತರದಾಯಿತ್ವ ಪ್ರೋತ್ಸಾಹ ಯೋಜನಾ ರಾಷ್ಟ್ರೀಯ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪಂಚಾಯಿತಿ, ಕಾರ್ಕಳ ತಾಲೂಕು ಪಂಚಾಯಿತಿ ಮತ್ತು ಮರವಂತೆ ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದೆ ಎಂದು ಹೇಳಿದರು.
ಈ ಪ್ರಶಸ್ತಿಗಳನ್ನು 24ರಂದು ನಡೆಯುವ 'ಪಂಚಾಯತ್ರಾಜ್ ದಿವಸ' ಆಚರಣೆ ಸಮಾರಂಭದಲ್ಲಿ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.
ಪ್ರಶಸ್ತಿ ಪಡೆದ ಜಿಲ್ಲಾ ಪಂಚಾಯಿತಿಗೆ ರು. 40 ಲಕ್ಷ, ತಾಲೂಕು ಪಂಚಾಯಿತಿಗೆ ರು. 20 ಲಕ್ಷ ಹಾಗೂ ಗ್ರಾಮ ಪಂಚಾಯಿತಿಗೆ ರು. 14 ಲಕ್ಷ ಪ್ರೋತ್ಸಾಹ ಅನುದಾನವನ್ನು ಕೂಡ ಈ ಸಂದರ್ಭದಲ್ಲಿ ಪ್ರಶಸ್ತಿಯೊಂದಿಗೆ ನೀಡಲಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

