ದಕ್ಷಿಣ ಕನ್ನಡ

ಪುತ್ತೂರು: ಮರ ಅಕ್ರಮ ಸಾಗಾಟ ಪತ್ತೆ

Published On :

ಪುತ್ತೂರು: ಪುತ್ತೂರು ಉಪವಿಭಾಗದ ಅರಣ್ಯಾಧಿಕಾರಿಗಳು ಗುರುವಾರಕೆಯ್ಯೂರು ಗ್ರಾಮದ ಕೈಕಂಬ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಮರ ಸಾಗಾಟ ಪ್ರಕರಣ ಪತ್ತೆ ಮಾಡಿ ಮರ ಮತ್ತು ಸಾಗಾಟಕ್ಕೆ ಬಳಸಿದ ಪಿಕ್‌ಅಪ್ ವಾಹನ ವಶಪಡಿಸಿಕೊಂಡಿದ್ದಾರೆ.
ನರಿಮೊಗರು ಶಾಖಾ ಉಪ ವಲಯ ಅರಣ್ಯಾಧಿಕಾರಿ ಕೆ.ವೆಂಕಪ್ಪ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ  ಕಿರಾಲ್‌ಬೋಗಿ ಜಾತಿಯ 4 ದಿಮ್ಮಿಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.  
ವಶಪಡಿಸಿಕೊಳ್ಳಲಾದ ಮರ ಮತ್ತು ಸಾಗಾಟಕ್ಕೆ ಬಳಸಿದ ಪಿಕ್‌ಅಪ್ ವಾಹನದ ಒಟ್ಟು ಮೌಲ್ಯ ರು. 2 ಲಕ್ಷ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಆರೋಪಿಗಳು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಅರಣ್ಯ ರಕ್ಷಕರಾದ ಮೋಹನ ಜಿ , ವೈ.ನಾರಾಯಣ ಮತ್ತು ವಾಹನ ಚಾಲಕ ಅಶೋಕ್ ಇದ್ದರು.
ಪುತ್ತೂರು ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.