ದಕ್ಷಿಣ ಕನ್ನಡ

ಸಚಿವ ನಿರಾಣಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Published On :

ಕ.ಪ್ರ.ವಾರ್ತೆ, ಬೆಂಗಳೂರು, ಏ.5
ಭೂಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ರದ್ದತಿ ಕೋರಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ ಭೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ. ಈ ಹಿಂದೆ ಏಕಸದಸ್ಯ ಪೀಠ, ದೂರಿನ ಆರೋಪಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ದೇವನಹಳ್ಳಿ ಸಮೀಪದ ಹೂವಿನನಾಯಕನಹಳ್ಳಿ ಸಮೀಪದ 20 ಎಕರೆ ಕೈಗಾರಿಕಾ ಜಮೀನನ್ನು ಸಚಿವರು  ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಿಸಿದ್ದಾರೆ ಎಂದು ಆರೋಪಿಸಿ ಆಲಂಪಾಶಾ ಎಂಬುವರು ಲೋಕಾಯುಕ್ತ ನ್ಯಾಯಾಲಯಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು. ಹೂವಿನನಾಯಕನಹಳ್ಳಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ನಿರ್ಮಿಸುವ ಯೋಜನೆಗೆ ಸಂಬಂಧಿಸಿದಂತೆ ತಮಗೆ ನೀಡಿದ್ದ ಜಮೀನಿನ ಗುತ್ತಿಗೆಯನ್ನು ನಕಲಿ ಸಹಿ ಮಾಡಿ ಸಚಿವರು ತಾವೇ ಪಡೆದುಕೊಂಡಿದ್ದಾರೆ. ಅಲ್ಲದೆ, ಈ ಭೂಮಿಯನ್ನು ಕಾನೂನುಬಾಹಿರವಾಗಿ ಡಿನೋಟಿಫೈ ಮಾಡಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ. ಇದು ಅಧಿಕಾರ ದುರುಪಯೋಗ ಎಂದು ಅವರು ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.