ದಕ್ಷಿಣ ಕನ್ನಡ

'ಜೀತದಾಳುಗಳ ಬಿಡುಗಡೆ ಮಾಡಿಸಿ'

Published On :

ನವದೆಹಲಿ: ಕರ್ನಾಟಕದ ಬೆಳಗಾವಿ ಜಿಲ್ಲೆಯ ನಾಗನೂರಿನಲ್ಲಿ ಜೀತದಾಳುಗಳಾಗಿ ದುಡಿಯುತ್ತಿರುವ 97 ಮಂದಿಯನ್ನು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಕೇಂದ್ರ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂಬ ಬಗ್ಗೆ ಇನ್ನು 3 ವಾರಗಳಲ್ಲಿ ವರದಿ ಸಲ್ಲಿಸುವಂತೆ ಅದು ಸೂಚನೆ ನೀಡಿದೆ. ಬೆಳಗಾವಿಯ ಜಿಲ್ಲಾಧಿಕಾರಿಗೆ ನೋಟಿಸ್ ನೀಡಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಆಯೋಗ ಆದೇಶಿಸಿದೆ. ಆಯೋಗವೇ ಸ್ವಯಂ ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದೆ.ಇದೇ ವೇಳೆ ಬಿಜೆಪಿಯ ವಿರೋಧದ ಹೊರತಾಗಿಯೂ ಕೇಂದ್ರ ಸರ್ಕಾರ ಕೇಂದ್ರ ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರನ್ನಾಗಿ ಎನ್‌ಐಎ ಮುಖ್ಯಸ್ಥ ಶರದ್ ಸಿ ಸಿನ್ಹಾ ಅವರನ್ನು ನೇಮಕ ಮಾಡಿದೆ. ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ 6 ಮಂದಿ ಸಮಿತಿ ಇವರ ಹೆಸರನ್ನು ಅಂತಿಮಗೊಳಿಸಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ. ಈ ಸಮಿತಿಯಲ್ಲಿ ಪ್ರಧಾನಿ, ಲೋಕಸಭಾ ಸ್ಪೀಕರ್, ರಾಜ್ಯಸಭೆಯ ಉಪ ಸಭಾಪತಿ, ಗೃಹ ಸಚಿವ, ಲೋಕಸಭೆ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕರು ಇದ್ದಾರೆ. ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಸಿನ್ಹಾ ಅವರ ನೇಮಕವನ್ನು ವಿರೋಧಿಸಿ ಪ್ರಧಾನಿಗೆ ಪ್ರತ್ಯೇಕವಾಗಿ ನೋಟ್ ಕೊಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.