ದಕ್ಷಿಣ ಕನ್ನಡ

ದ್ವಿತೀಯ ಪಿಯು ಗಣಿತಕ್ಕೆ ಏಳು ಗ್ರೇಸ್ ಮಾರ್ಕ್ಸ್

Published On :

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಪದವಿ ಪೂರ್ವ ಶಿಕ್ಷಣ ಇಲಾಖೆ ಗಣಿತ ವಿಷಯಕ್ಕೆ ಏಳು ಗ್ರೇಸ್ ಮಾರ್ಕ್ಸ್ ನೀಡಲು ನಿರ್ಧರಿಸಿದೆ.
ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಪ್ರಶ್ನೆಗಳು ತಪ್ಪಾಗಿ ಮುದ್ರಣಗೊಂಡಿದ ಹಿನ್ನೆಲೆಯಲ್ಲಿ ಗ್ರೇಸ್ ಮಾರ್ಕ್ಸ್‌ನೀಡಲು ಇಲಾಖೆ ಮುಂದಾಗಿದೆ. ಆದರೆ,  ಇದುತಪ್ಪಾದ ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದವರಿಗೆ ಮಾತ್ರ ಎಂಬುವುದು ಮರೆಯಬಾರದು.  ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಪ್ರಶ್ನೆಗಳು ಲೋಪದಿಂದ ಕೂಡಿದ್ದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ತಪ್ಪು ಎತ್ತಿ ಹಿಡಿದಿದ್ದರು. ಅಲ್ಲದೆ, ಮೌಲ್ಯಮಾಪಕರು ಸಹ ಗ್ರೇಸ್ ಅಂಕ ನೀಡುವುದೇ ಉತ್ತಮ ಎಂದೇ ಹೇಳಿದ್ದರಿಂದ ಕೊನೆಗೆ ಇಲಾಖೆಯು ಏಳು ಅಂಕಗಳನ್ನು ನೀಡಲು ಒಪ್ಪಿಗೆ ಸೂಚಿಸಿದೆ ಎಂದುಪರೀಕ್ಷಾ ವಿಭಾಗದ ಉಪ ನಿರ್ದೇಶಕರಾದ ಎ.ಎಚ್.ಮಟ್ಟೂರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಪ್ರಶ್ನೆ ತಪ್ಪಿಲ್ಲ ಗೊಂದಲ ಅಷ್ಟೆ: ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ಪ್ರಶ್ನೆಗಳು ತಪ್ಪಿತ್ತು ಎಂದು ಹೇಳುವುದು ಸರಿಯಲ್ಲ. ಕೇವಲ ಪ್ರಶ್ನೆಗಳು ಗೊಂದಲ ಮಯವಾಗಿತ್ತು. ಇದರಿಂದ ವಿದ್ಯಾರ್ಥಿಗಳು  ಉತ್ತರಿಸಲು ಹೆಚ್ಚಿನ ಸಮಯ ಬೇಕಾಗಿತ್ತು. ಯಾರು ಗೊಂದಲದ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿದ್ದಾರೋ ಅವರಿಗೆ ಈ ಏಳು ಅಂಕಗಳು ದೊರೆಯಲಿದೆ ಎಂದು ಮಟ್ಟೂರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.