ದಕ್ಷಿಣ ಕನ್ನಡ

ಲಾರಿ ಹಾಯ್ದು ಕಾನ್‌ಸ್ಟೇಬಲ್ ಸಾವು, ಚಾಲಕ ಲಾರಿಯೊಂದಿಗೆ ಪರಾರಿ

Published On :

ಮೂಲ್ಕಿ: ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಅನಾಮತ್ತಾಗಿ ಲಾರಿ ಹರಿಸಿ ಪರಾರಿಯಾಗಿರುವ ಘಟನೆ ಗುರುವಾರ ಬಪ್ಪನಾಡು ದೇವಸ್ಥಾನದ ಬಳಿಯಿರುವ ಚೆಕ್‌ಪೋಸ್ಟ್‌ನಲ್ಲಿ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕಾನ್‌ಸ್ಟೇಬಲ್ ಸಾವಿಗೀಡಾಗಿದ್ದಾರೆ.
 ಮೂಲ್ಕಿ ಪೊಲೀಸ್ ಠಾಣೆಯ ಶಿವರಾಜಪ್ಪ(29) ಎಂಬವರೇ ಮೃತಪಟ್ಟವರು.
 ಜಿಲ್ಲೆಯಲ್ಲಿ ಕರಾವಳಿ ರಕ್ಷಣಾ ಕವಚ ವಿಶೇಷ ಕಾರ್ಯಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ಬಪ್ಪನಾಡು ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ಅಳವಡಿಸಲಾಗಿತ್ತು. ಗುರುವಾರ ಬೆಳಗ್ಗೆ ಶಿವರಾಜಪ್ಪ ಸೇರಿದಂತೆ ಮೂಲ್ಕಿ ಠಾಣೆಯ ಮೂವರು ಕಾನ್‌ಸ್ಟೇಬಲ್‌ಗಳು ತಪಾಸಣೆಯಲ್ಲಿ ಕಾರ್ಯನಿರತರಾಗಿದ್ದರು. ನಸುಕಿನ ವೇಳೆ 3.30ಕ್ಕೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿಯೊಂದು ಚೆಕ್‌ಪೋಸ್ಟ್ ಬಳಿ ಬಂದಾಗ ಶಿವರಾಜಪ್ಪ ಲಾರಿಯನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರ ಸೂಚನೆಯನ್ನು ಪಾಲಿಸದ ಲಾರಿ ಚಾಲಕ ಅತಿ ವೇಗವಾಗಿ ಶಿವರಾಜಪ್ಪನವರ ಮೇಲೆಯ ಲಾರಿ ಚಲಾಯಿಸಿ ಲಾರಿಯೊಂದಿಗೆ ಪರಾರಿಯಾಗಿದ್ದಾನೆ.
 ಈ ಸಂದರ್ಭದಲ್ಲಿ ತಲೆಗೆ ತೀವ್ರ ಗಾಯಗೊಂಡ ಶಿವರಾಜಪ್ಪನವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
 ದಾವಣಗೆರೆಯ ಹೊನ್ನಾಳಿ ತಾಲೂಕಿನ ಅರಬಕಟ್ಟೆಯವರಾಗಿರುವ ಶಿವರಾಜಪ್ಪ 2008ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದು ಸುಳ್ಯದಲ್ಲಿ ಕರ್ತವ್ಯ ನಿರ್ವಹಿಸಿ, 2011ರಲ್ಲಿ ಮೂಲ್ಕಿ ಪೊಲೀಸ್ ಠಾಣೆಗೆ ಸೇರಿದ್ದು ಇತ್ತೀಚೆಗಷ್ಟೆ ವಿವಾಹವಾಗಿದ್ದರು.
 ಲಾರಿಯು ಉಡುಪಿ ಕಡೆಗೆ ಸಾಗಿದ್ದು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.