ನಿಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ಸಮ್ಮೇಳನ
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ, ನಿಟ್ಟೆ ಇದರ ವಿದ್ಯುತ್ ಮತ್ತು ವಿದ್ಯುನ್ಮಾನ ಅಭಿಯಂತರ (ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) ವಿಭಾಗ ಏ.12 ಮತ್ತು 13ರಂದು ವಿದ್ಯುತ್ ಅಭಿಯಂತರಿಕೆಯಲ್ಲಿನ ಇತ್ತೀಚಿನ ಬೆಳವಣಿಗೆಗಳು ಎನ್ನುವ ವಿಷಯದ ಕುರಿತು ರಾಷ್ಟ್ರಮಟ್ಟದ ಸಮ್ಮೇಳನವನ್ನು ಹಮ್ಮಿಕೊಂಡಿದ್ದು. ಹಸಿರು ಆಸ್ಕರ್ ಪ್ರಶಸ್ತಿ ಪುರಸ್ಕೃತ, ನೋಬಲ್ ಎನಜರ್ ಸೋಲಾರ್ ಟೆಕ್ನಾಲಜೀಸ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಬಾಕರ್ ಏ. 12ರಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಉದ್ಘಾಟನಾ ಭಾಷಣವನ್ನು ಮಾಡಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಹಾಗೂ ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರೂ ಆಗಿರುವ ಶ್ರೀ ಎನ್. ವಿನಯ ಹೆಗ್ಡೆಯವರು ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಮ್ಮೇಳನದಲ್ಲಿ ಭಾಗವಹಿಲಿಚ್ಛಿಸುವ ತಾಂತ್ರಿಕ ಸಂಸ್ಥೆಗಳ ಪ್ರತಿನಿಧಿಗಳು ವಿಭಾಗ ಮುಖ್ಯಸ್ಥರಾದ ಪ್ರೊ. ವಾಸುದೇವ ಶೆಟ್ಟಿಗಾರ್ ಮೊ. ನಂ 9845913123 ಇವರನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

