ದಕ್ಷಿಣ ಕನ್ನಡ

ಗಂಗಯ್ಯ ಶೆಟ್ಟಿಗೆ 'ಯಕ್ಷಮಂಗಳ'

Published On :

ಮಂಗಳೂರು: ಕಟೀಲು ಮೇಳದ ಹಿರಿಯ ವೇಷಧಾರಿ ಗೇರುಕಟ್ಟೆ ಗಂಗಯ್ಯ ಶೆಟ್ಟಿಗೆ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಅಧ್ಯಯನ ಕೇಂದ್ರದ “¾ÚßOÚÐÈÚßMVÚ×Ú ®ÚÃËÚÒ¡’ ಪ್ರಕಟಿಸಲಾಗಿದೆ.  ಏ.20ರಂದು ವಿವಿಯ ಮಂಗಳ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಂಗಯ್ಯ ಶೆಟ್ಟಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 25 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಗಳನ್ನು ಒಳಗೊಳ್ಳಲಿದೆ.  ಕಟೀಲು ಮೇಳದಲ್ಲಿ 40 ವರ್ಷ ತಿರುಗಾಟ ಪೂರೈಸಿದ ಶೆಟ್ಟರು, ಹಿರಣ್ಯಾಕ್ಷ, ಕೌಂಡ್ಲಿಕ, ಮಹಿಷಾಸುರ, ನರಕಾಸುರ, ಮೈರಾವಣ, ರಾವಣ, ಕುಂಭಕರ್ಣ, ಶುಂಭ, ಮಧು-ಕೈಟಭ ಮೊದಲಾದ ವೇಷಗಳಿಂದ ಪ್ರಸಿದ್ಧರಾಗಿದ್ದಾರೆ. ಮಹಿಷಾಸುರ ಮತ್ತು ರುದ್ರಭೀಮ ಇವರಿಗೆ ಹೆಚ್ಚಿನ ಕೀರ್ತಿ ತಂದುಕೊಟ್ಟಿವೆ. ಮೇಳದ ವ್ಯವಸ್ಥಾಪಕರಾಗಿಯೂ ಕಾರ್ಯನಿರ್ವಹಿಸಿ ಸಂಘಟನೆಯ ಅನುಭವ ಇವರದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.