ದಕ್ಷಿಣ ಕನ್ನಡ

ಗುಡ್ಡೆಹೊಸೂರು ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ

Published On :

ಮಡಿಕೇರಿ: ಗುಡ್ಡೆಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಸಮುದಾಯದತ್ತ ಶಾಲೆ ಕಾರ್ಯಕ್ರಮ ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ಎನ್. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆಯಿತು.
  ಶಾಲಾ ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಸ್ವಾಗತಿಸಿದರು. ಮಾರ್ಗದರ್ಶಕರಾಗಿ ಪ್ರೌಢಶಾಲೆ ಶಿಕ್ಷಕಿ ಲತಾ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರರಾಜೇ ಅರಸ್, ಡಯಟ್ ಶಿಕ್ಷಕರಾದ ವೇದಮೂರ್ತಿ, ಸಿ.ಆರ್.ಪಿ. ಪ್ರಕಾಶ್, ಐ.ಇ.ಆರ್.ಟಿ.  ವೆಂಕಟೇಶ್, ಆರ್.ಇ.ಎಂ.ಎಸ್. ಅಧಿಕಾರಿ ಮಹದೇವ್ ಉಪಸ್ಥಿತರಿದ್ದರು. ಶಿಕ್ಷಕಿ ಮರಿಯಾ ನಿರೂಪಿಸಿದರು. ಚಂದ್ರವತಿ ವಂದಿಸಿದರು. ರಜಾ ದಿನಗಳ ಸದುಪಯೋಗದ ಬಗ್ಗೆ ಶಿಕ್ಷಕಿ ಮಂಜುಳಾ ಮಾತನಾಡಿದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಶಿಕ್ಷಕಿ ರುಕ್ಮಿಣಿ ಮತ್ತು ಎ.ಟಿ. ನೀತಾ ಮಾತಾನಾಡಿದರು. ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರು ಭಾಗವಹಿಸಿದ್ದರು. ನಿವೃತ್ತ ಶಿಕ್ಷಕಿ ಶೇಷಮ್ಮ ಮಕ್ಕಳ ರಜಾದಿನಗಳ ಕಾರ್ಯಚಟುವಟಿಕೆಗಳ ಬಗ್ಗೆ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.