ಕಾಂಗ್ರೆಸ್ ಟಿಕೆಟ್ ಹಗರಣ ಸಿಬಿಐ ತನಿಖೆಯಾಗಲಿ: ಡೀವಿ
ಸುಳ್ಯ: ಬಿಜೆಪಿ ಬಗ್ಗೆ ಯಾವಾಗಲೂ ಭ್ರಷ್ಟಾಚಾರದ ಆರೋಪ ಮಾಡುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ಗಾಗಿ ನಾಯಕರು ಹಣ ಪಡೆಯುವ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಈ ಕುರಿತಂತೆ ಸಿಬಿಐ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ. ಸದಾನಂದ ಗೌಡ ಹೇಳಿದರು. ಸುಳ್ಯದಲ್ಲಿ ನಡೆದ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಪ್ರಚಾರ ಸಭೆಗೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಯಡಿಯೂರಪ್ಪನವರು ಕೆಲವು ಬಿಜೆಪಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಅವರನ್ನು ಸೋಲಿಸಲು ಕಾರ್ಯತಂತ್ರ ಹೂಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಡಿವಿಎಸ್, ಈ ಯತ್ನದಲ್ಲಿ ಅವರು ಸಫಲರಾಗುವುದಿಲ್ಲ. ಅವರ ಹಿಟ್ ಲಿಸ್ಟ್ನಲ್ಲಿರುವವರ ಹೆಸರನ್ನು ನಾವೇ ಬಹಿರಂಗಪಡಿಸುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

