ದಕ್ಷಿಣ ಕನ್ನಡ

ನೀತಿ ಸಂಹಿತೆ ಉಲ್ಲಂಘನೆ: ಗುತ್ತಿಗೆದಾರನ ವಿರುದ್ಧ ಕೇಸು

Published On :

ಸುಳ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಧಿಕ ಮೊತ್ತದ ಹಣ ಡ್ರಾ ಮಾಡಿ ಸಾಗಿಸುತ್ತಿದ್ದ ಗುತ್ತಿಗೆದಾರನೋರ್ವನ ವಿರುದ್ಧ ಸುಳ್ಯ ಪೊಲೀಸರು ಕೇಸು ದಾಖಲಿಸಿದ್ದಾರೆ.  ಸುಳ್ಯದ ಗುತ್ತಿಗೆದಾರ, ಬಿಜೆಪಿ ಬೆಂಬಲಿಗ ಗೋಪಾಲಕೃಷ್ಣ ಎಂಬವರು ಶುಕ್ರವಾರ ಸುಳ್ಯದ ಸಿಂಡಿಕೇಟ್ ಬ್ಯಾಂಕ್‌ನ ಶಾಖೆಯಿಂದ ರು.  8 ಲಕ್ಷವನ್ನು ಡ್ರಾ ಮಾಡಿ ತನ್ನ ಕಾರಿನಲ್ಲಿರಿಸಿದ್ದರು. ಕಾರನ್ನು ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುದುದರಿಂದ ಪೊಲೀಸ್ ಸಿಬ್ಬಂದಿ ಬಂದು ಕಾರು ಪರಿಶೀಲಿಸಿದಾಗ ಹಣವಿರುವುದು ಪತ್ತೆಯಾಯಿತು. ವಾಹನ ಸಮೇತ ಗೋಪಾಲಕೃಷ್ಣರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಈ ಕುರಿತು ವಿಚಾರಣೆ ನಡೆಸಿದರು. ತನಗೆ ಈ ಹಣ ಕೆಆರ್‌ಡಿಸಿಎಲ್ ಖಾತೆಯಿಂದ ಬಂದಿರುವುದಾಗಿಯೂ ಮಡಿಕೇರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಕಾರ್ಮಿಕರಿಗೆ ಸಂಬಳ ನೀಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಗೋಪಾಲಕೃಷ್ಣ, ದಾಖಲೆ ಸಲ್ಲಿಸಿದರಾದರೂ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು.
ಮದ್ಯ ಅಕ್ರಮ ಮಾರಾಟ: ಕಾಂಗ್ರೆಸ್ ಮುಖಂಡನ ಬಂಧನ
ಸುಳ್ಯ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅರಂತೋಡಿನ ಕಾಂಗ್ರೆಸ್ ಮುಖಂಡ ಸದಾನಂದ ಅಡ್ತಲೆ ಎಂಬಾತನನ್ನು ಸುಳ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ತನ್ನ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ದಾಳಿ ನಡೆಸಿ, 280 ಬಾಟಲಿ ಮದ್ಯವನ್ನು ವಶ ಪಡಿಸಿಕೊಂಡು ಆರೋಪಿಯನ್ನು ಬಂಧಿಸಿದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ಬ್ರಹ್ಮಾವರ: ಇಲ್ಲಿನ ಕೆಂಜೂರು ಗ್ರಾಮದ ಅಮ್ಮುಂಜೆ ಎಂಬಲ್ಲಿನ ವ್ಯಕ್ತಿಯೊಬ್ಬರು ಆರ್ಥಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಮೃತರು ಧೂಮ ಹಾಂಡ (60). ಅವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಇತ್ತೀಚೆಗೆ ಸರಿಯಾದ ಕೆಲಸವಿಲ್ಲದೆ ಹಣದ ಅಡಚಣೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.