ಪುತ್ತೂರು: ಎಸ್‌ಡಿಪಿಐನಿಂದ ಇಬ್ಬರು ನಾಮಪತ್ರ ಸಲ್ಲಿಕೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಧಿಕೃತ ಅಭ್ಯರ್ಥಿಯಾಗಿ ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿಯ ಅಧ್ಯಕ್ಷ ಕೆ. ಅಬೂಬಕ್ಕರ್ ಸಿದ್ದೀಕ್ ಮತ್ತು ಡಮ್ಮಿ ಅಭ್ಯರ್ಥಿಯಾಗಿ ಎಸ್‌ಡಿಪಿಐ ಜಿಲ್ಲಾ ಸಮಿತಿಯ ಸದಸ್ಯ ಇಬ್ರಾಹಿಂ ಸಾಗರ್ ಇವರಿಬ್ಬರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ಎಸ್‌ಡಿಪಿಐ ಪಕ್ಷದ ಕಚೇರಿಯಿಂದ ಕಿಲ್ಲೆ ಮೈದಾನದ ಮೂಲಕ ತನ್ನ ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ಆಗಮಿಸಿದ ಸಿದ್ದೀಕ್ ಮತ್ತು ಇಬ್ರಾಹಿಂ ಸಾಗರ್ ಅವರು ಪ್ರತ್ಯೇಕವಾಗಿ ಪಕ್ಷದ ನಾಲ್ವರು ಮುಖಂಡರ ಜತೆ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ ಎಚ್. ಪ್ರಸನ್ನ ಅವರಿಗೆ ನಾಮಪತ್ರ ಸಲ್ಲಿಸಿದರು. ಮೊದಲಿಗೆ ಸಿದ್ದೀಕ್ ಅವರು ನಾಪಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಿಧಾನಸದಭಾ ಕ್ಷೇತ್ರದ ಎಸ್‌ಡಿಪಿಐ ಚುನಾವಣಾ ಉಸ್ತುವಾರಿ ಅನ್ವರ್ ಸಾದತ್ ಬಜತ್ತೂರು, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಆಲ್ಫಾನ್ಸೋ ಫ್ರಾಂಕ್, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಮತ್ತು ನ್ಯಾಯವಾದಿ ಅಶ್ರಫ್ ಅಗ್ನಾಡಿ ಜತೆಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

