ದಕ್ಷಿಣ ಕನ್ನಡ

'ನೀತಿ ಸಂಹಿತೆ ಕಟ್ಟುನಿಟ್ಟು ಜಾರಿಗೆ ಕಣ್ಗಾವಲು'

Published On :

ಸುಳ್ಯ: ಚುನಾವಣಾ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದ್ದು, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಅನುಷ್ಠಾನ ಹಾಗೂ ಚುನಾವಣಾ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಲು ಸುಳ್ಯಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗಳು ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ, ಪೊಲೀಸ್ ಠಾಣೆ ಹಾಗೂ ತಾಲೂಕು ಕಚೇರಿಗಳಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.
ಚುನಾವಣೆಯಲ್ಲಿ ರಾಜಕಿಯ ಪಕ್ಷಗಳ, ಅಭ್ಯರ್ಥಿಗಳ ಪ್ರತಿಯೊಂದು ಸಭೆ ಸಮಾರಂಭಗಳ ಮೇಲೆ ಆಯೋಗವು ಹದ್ದಿನ ಕಣ್ಣಿಟ್ಟಿದೆ. ಇದಕ್ಕಾಗಿಯೇ ಸೆಕ್ಟರ್ ಮ್ಯಾಜಿಸ್ಟ್ರೇಟ್, ಸೆಕ್ಟರ್ ಆಫೀಸರ್ಸ್ ಹಾಗೂ ಸ್ಟೇಟಿಕ್ ಸರ್ವಯಲನ್ಸ್ ತಂಡಗಳು ಕಾರ್ಯಾಚರಿಸುತ್ತಿದ್ದು ಇವರ ಜತೆಗೆ ವೀಡಿಯೋ ಕಣ್ಗಾವಲು ತಂಡವೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದರು.
ಚುನಾವಣಾ ಅಕ್ರಮಗಳನ್ನು ತಡೆಯಲು ಸೆಕ್ಟರ್ ಮ್ಯಾಜಿಸ್ಟ್ರೇಟ್ ತಂಡಗಳಿಗೆ ಸ್ಮಾರ್ಟ್‌ಫೋನ್‌ಗಳನ್ನು ವಿತರಿಸಲಾಗಿದೆ. ಸದ್ಯದಲ್ಲಿಯೇ ಇತರ ಅಧಿಕಾರಿಗಳಿಗೂ ಈ ವ್ಯವಸ್ಥೆಯು ಲಭ್ಯವಾಗುವಂತೆ ನಿರ್ದೇಶನ ನೀಡಲಾದಗಿದೆ ಎಂದು ಡಿಸಿ ತಿಳಿಸಿದರು.
ಪರಿಶೀಲನಾ ಸಭೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಯು ಅನುಸರಿಸಬೇಕಾದ ರೀತಿಯ ಕುರಿತು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಡಾ. ಹರೀಶ್ ಕುಮಾರ್ ಮಾಹಿತಿ ನೀಡಿದರು.
ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಪ್ರಸನ್ನ, ಚುನಾವಣಾಧಿಕಾರಿ ಶರಣಬಸಪ್ಪ, ಸರ್ಕಲ್ ಇನ್‌ಸ್ಪೆಕ್ಟರ್ ಸುದರ್ಶನ್, ತಹಸೀಲ್ದಾರ್ ವೇಣುಗೋಪಾಲ್ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿರುವ ಅಧಿಕಾರಿಗಳ ತಂಡದ ಮುಖ್ಯಸ್ಥರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.