ದಕ್ಷಿಣ ಕನ್ನಡ

ಕಾರ್ಯಕರ್ತರು ಯಾವುದೇ ವದಂತಿಗೆ ಕಿವಿಗೊಡಬೇಡಿ: ಪ್ರತಾಪ ಸಿಂಹ

Published On :

ಬೆಳ್ತಂಗಡಿ: ಬಿಜೆಪಿ ತತ್ವ ಸಿದ್ಧಾಂತಗಳಿಗೆ ಬದ್ಧವಾದ ಪಕ್ಷ. ಪಕ್ಷವು ವ್ಯಕ್ತಿಗಿಂತ ದೇಶಹಿತ ಮುಖ್ಯ ಎಂಬ ತತ್ವವನ್ನು ಅನುಸರಿಸಿಕೊಂಡು ಬಂದಿದೆ. ಹೀಗಾಗಿ ಕಾರ್ಯಕರ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪಕ್ಷದ ಜಿಲ್ಲಾ ಪ್ರಭಾರಿ ಪ್ರತಾಪ ಸಿಂಹ ನಾಯಕ್ ಮನವಿ ಮಾಡಿದ್ದಾರೆ.
ಅವರು ಶನಿವಾರ ಬೆಳ್ತಂಗಡಿಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನದ ಆಚರಣೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಪಂಡಿತ್ ದೀನದಯಾಳ ಉಪಾಧ್ಯಾಯರ ಪರಿಶ್ರಮ, ಶ್ಯಾಮ ಮುಖರ್ಜಿಯವರ ಬಲಿದಾನ, ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಆಡ್ವಾಣಿ ಅವರ ಮಾರ್ಗದರ್ಶನದಿಂದ ಇಂದು ಪಕ್ಷ ಬೃಹತ್ ಆಗಿ ಬೆಳೆದಿದೆ. ದೇಶದ ಅನೇಕ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿದೆ ಎಂದು ಹೇಳಿದರು.
ಪಕ್ಷದಲ್ಲಿನ ಎಲ್ಲಾ ಹಿರಿಯರು ದೇಶದ ಹಿತಾಸಕ್ತಿಯಿಂದ ಪಕ್ಷಕ್ಕಾಗಿ ದುಡಿದರೆ ಹೊರತು ಸ್ವತಃ ಲಾಭಕ್ಕಾಗಿ ಅಲ್ಲ ಎಂಬುದು ನಮಗೆಲ್ಲರಿಗೂ ಗೊತ್ತು. ರಾಷ್ಟ್ರಹಿತದ ಮುಂದೆ ವ್ಯಕ್ತಿ ಗೌಣ. ಕಾರ್ಯಕರ್ತರು, ಸಾಮಾನ್ಯ ಮತದಾರರು ಇದುವರೆಗೆ ಪಕ್ಷದ ಸಿದ್ಧಾಂತಗಳಿಗೆ ಮನ್ನಣೆ ನೀಡಿ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು.
ಹೀಗಾಗಿ ಕಾರ್ಯಕರ್ತರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪಕ್ಷದ ಸೂಚನೆಗೆ ಗಮನ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು.
ಮಂಡಲಾಧ್ಯಕ್ಷೆ ಶಾರದಾ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಮಾಜಿ ಶಾಸಕ ಪ್ರಭಾಕರ ಬಂಗೇರ, ಪ್ರಧಾನ ಕಾರ್ಯದರ್ಶಿಗಳಾದ ನಾರಾಯಣ ಆಚಾರ್, ಮಹಾಬಲ ಗೌಡ, ಜಿಪಂ ಸದಸ್ಯರಾದ ಚಂದ್ರಕಲಾ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ತಾಲೂಕು ಪಂಚಾಯತ್ ಸದಸ್ಯ ವಿಜಯ ಗೌಡ ಹಾಗೂ ಪಕ್ಷದ ಪ್ರಮುಖರಾದ ರಾಜೇಶ್ ಪ್ರಭು, ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸದಾನಂದ ನಾವರ, ನಂದಕುಮಾರ್ ಮತ್ತಿತರರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.