ದಕ್ಷಿಣ ಕನ್ನಡ

ರಾಮಕ್ಷೇತ್ರದಲ್ಲಿ 19ರವರೆಗೆ ಜಾತ್ರೆ

Published On :

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀ ರಾಮ ಕ್ಷೇತ್ರದಲ್ಲಿ ಏ.12ರಿಂದ 53ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಶ್ರೀ ರಾಮ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ ಕಾರ್ಯಗಳು ನಡೆಯುತ್ತಿವೆ. ಜಾತ್ರಾ ಸಂಭ್ರಮ ಏ.19ರವರೆಗೆ ನಡೆಯಲಿದೆ.
ಶನಿವಾರ ಪ್ರಾತಃಕಾಲ ನಾರಿಕೇಳ ಗಣಯಾಗ, ಗುರುಗಳಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ, ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಮತ್ತು ಶಿರಡಿ ಶ್ರೀ ಸತ್ಯಸಾಯಿ ಬಾಬಾ ಗುರುಗಳಿಗೆ ಪೂಜೆ, ಮಹಾಪೂಜೆ, ಅನ್ನಪೂರ್ಣೇಶ್ವರಿ ಮಂದಿರದಲ್ಲಿ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಲಂಕಾರ ಪೂಜೆ, ಅನ್ನ ಸಂತರ್ಪಣೆ, ಸಾಯಂಕಾಲ ಶ್ರೀ ಗುರುದೇವರುಗಳ ಬಲಿ ಮೂರ್ತಿಗಳ ಬಲಿ ಉತ್ಸವ, ಉತ್ಸವ ಪೂಜೆಗಳು ನಡೆದವು.
ಏ.14ರಂದು ಬೆಳಿಗ್ಗೆ ನವಗ್ರಹ ಶಾಂತಿ ಹೋಮ, ನವಗ್ರಹಗಳಿಗೆ ವಿಶೇಷ ಪೂಜೆ, ಮಹಾಪೂಜೆ, ಅನ್ನ ಸಂತರ್ಪಣೆ, ಸಂಜೆ ರಜತ ಪಾಲಕಿ ಉತ್ಸವ ನಡೆಯಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.