7 ಅಭ್ಯರ್ಥಿಗಳಿಂದ ನಾಮಪತ್ರ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳಾಗಿ ಸೋಮವಾರ ಏಳು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಟ್ಟು ಎಂಟು ನಾಮಪತ್ರ ಸಲ್ಲಿಕೆಯಾಗಿದೆ.
ಜೆಡಿಎಸ್ ಅಭ್ಯರ್ಥಿ ನಂದರಾಜ ಸಂಕೇಶರು ಮೊದಲು ನಾಮಪತ್ರ ಸಲ್ಲಿಸಿದರು. ಶಾಸ್ತ್ರಿ ವೃತ್ತದಿಂದ ಜೆಡಿಎಸ್ ಕಾರ್ಯಕರ್ತರ ಮೆರವಣಿಗೆ ಮೂಲಕ ಆಗಮಿಸಿದ ಅವರು ನಾಯಕರೊಂದಿಗೆ ಹೋಗಿ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಕ್ಷೇತ್ರಾಧ್ಯಕ್ಷ ಚಂದ್ರಾ ಕೋಲ್ಚಾರ್, ದಿನೇಶ್ ಮಡಪ್ಪಾಡಿ, ಎ.ಸಿ. ನಂದನ್ ನಳಿನ್ ಕುಮಾರ್ ಕೋಡ್ತುಗುಳಿ ಇದ್ದರು.
ಡಾ. ರಘು ನಾಮಪತ್ರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ರಘು ನಾಮಪತ್ರ ಸಲ್ಲಿಸಿದರು. ಪಕ್ಷದ ಕಚೇರಿಯಿಂದ ಮೆರವಣಿಗೆಯ ಮೂಲಕ ಆಗಮಿಸಿದ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಕಾರ್ಯದರ್ಶಿ ಪಿ.ಎಸ್. ಗಂಗಾಧರ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಪಿ. ವರ್ಗೀಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಧನಂಜಯ ಅಡ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಇದ್ದರು.
ಕುಶಲರಿಂದ ಎರಡು ನಾಮಪತ್ರ: ಸುಳ್ಯದ ಮಾಜಿ ಶಾಸಕ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕೆಜೆಪಿ ಪಕ್ಷದಿಂದ ಮತ್ತು ಪಕ್ಷೇತರರಾಗಿ ಎರಡು ನಾಮಪತ್ರ ಸಲ್ಲಿಸಿದರು.
ಎಸ್. ಅಂಗಾರ ನಾಮಪತ್ರ: ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಎಸ್. ಅಂಗಾರ ನಾಮಪತ್ರ ಸಲ್ಲಿಸಿದರು. ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಸಾಗಿ ದೇವರ ದರ್ಶನ ಪಡೆದು ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಎನ್.ಎ. ರಾಮಚಂದ್ರ, ತಾ.ಪಂ. ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಹಿರಿಯ ಮುಖಂಡ ಉಮೇಶ್ ವಾಗ್ಳೆ, ತಾ.ಪಂ. ಮಾಜಿ ಅಧ್ಯಕ್ಷೆ ಪುಷ್ಪಾವತಿ ಬಾಳಿಲ ಇದ್ದರು.
ಪಕ್ಷೇತರ ಅಭ್ಯರ್ಥಿಯಾಗಿ ಸುಳ್ಯ ನೆಹರು ಸ್ಮಾರಕ ಕಾಲೇಜಿನ ನಿವೃತ್ತ ನೌಕರ ಎನ್. ಕರುಣೇಶ್ ನಾಮಪತ್ರ ಸಲ್ಲಿಸಿದರು.
ಎಸ್ಡಿಪಿಐ ಅಭ್ಯರ್ಥಿ: ಅಪರಾಹ್ನ ಎಸ್ಡಿಪಿಐ ಅಭ್ಯರ್ಥಿಯಾಗಿ ಎಂ. ಕೂಸಪ್ಪ ನಾಮಪತ್ರ ಸಲ್ಲಿಸಿದರು.
ಸುಳ್ಯದ ಸ್ವಾತಿ ಸಿಟಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಗಾಂಧಿನಗರದ ಪಕ್ಷದ ಕಚೇರಿಯಿಂದ ಮೆರವಣಿಗೆಯ ಮೂಲಕ ಆಗಮಿಸಿದ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಪಕ್ಷದ ಅಧ್ಯಕ್ಷ ಅಬ್ದುಲ್ ಕಲಾಂ, ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡರಾದ ಅಬ್ದುಲ್ ಹಮೀದ್ ಸಾಲ್ಮರ, ಪ್ರಾಂಕೋ ಇದ್ದರು.
ಮತ್ತೋರ್ವ ಅಂಗಾರ!
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಂಗಾರ ಹೆಸರಿನ ಇನ್ನೋರ್ವರು ನಾಮಪತ್ರ ಸಲ್ಲಿಸಿದ್ದಾರೆ. ಆಲೆಟ್ಟಿಯ ಮೊರಂಗಲ್ಲು ನಿವಾಸಿ ಎ. ಅಂಗಾರ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಇಬ್ಬರು ಕಾಂಗ್ರೆಸ್ ನಾಯಕರೂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

