ದಕ್ಷಿಣ ಕನ್ನಡ

ಮೂಡುಬಿದಿರೆಯಲ್ಲಿ ಅಭಯ, ಅಮರ

Published On :

ಮೂಲ್ಕಿ: ವಿಧಾನಸಭಾ ಚುನಾವಣೆಗೆ ಮೂಡುಬಿದಿರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ, ರಾಜ್ಯ ವಿಪಕ್ಷ ಮುಖ್ಯ ಸಚೇತಕ ಕೆ. ಅಭಯಚಂದ್ರ ಜೈನ್ ಸೋಮವಾರ ನಾಮಪತ್ರ ಸಲ್ಲಿಸಿದರು.
ಮೂಡುಬಿದಿರೆ ನಾಡಕಚೇರಿಯಲ್ಲಿ ತಹಸೀಲ್ದಾರ್ ನಾಗರಾಜ್‌ಗೆ ನಾಮಪತ್ರ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೇಘನಾಥ ಶೆಟ್ಟಿ, ಕಾರ್ಯದರ್ಶಿ ರತ್ನಾಕರ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸದಾಶಿವ ಸಾಲ್ಯಾನ್ ಪಯ್ಯೊಟ್ಟು, ಮೂಲ್ಕಿಯ ಹಿರಿಯ ಕಾಂಗ್ರೆಸಿಗ ಎಂ.ಬಿ. ನೂರು ಮಹಮ್ಮದ್ ಇದ್ದರು.
ನಾಮಪತ್ರ ಸಲ್ಲಿಕೆಗೆ ಮೊದಲು ಮೂಡುಬಿದಿರೆ ಸಾವಿರ ಕಂಬದ ಬಸದಿಯಿಂದ ನಾಡಕಚೇರಿಯವರೆಗೆ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸಿ ಬಳಿಕ ನಾಮಪತ್ರ ಸಲ್ಲಿಸಿದರು.
ಅಮರನಾಥ ಶೆಟ್ಟಿ ನಾಮಪತ್ರ ಸಲ್ಲಿಕೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದಿಂದ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಮೂಡುಬಿದಿರೆಯ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ಜರಗಿದ ಪಕ್ಷದ ಕಾರ್ಯಕರ್ತರ ಸಭೆಯ ಬಳಿಕ ಪಾದಯಾತ್ರೆಯ ಮೂಲಕ ಮೂಡುಬಿದಿರೆ ನಾಡ ಕಚೇರಿಗೆ ಆಗಮಿಸಿ ತಹಸೀಲ್ದಾರ್ ನಾಗರಾಜ್‌ಗೆ ತಮ್ಮ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಜಯಶ್ರೀ ಅಮರನಾಥ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.