ಶರಾಬು ಸೇವನೆಗೆ ಆಕ್ಷೇಪಿಸಿದ್ದಕ್ಕೆ ಹಲ್ಲೆ
ಉಪ್ಪಿನಂಗಡಿ: ಇಲ್ಲಿನ ಸಮೀಪದ ಹಿರೆಬಂಡಾಡಿ ಗ್ರಾಮದ ಪಟ್ಟರ್ತಿ ಎಂಬಲ್ಲಿ ವ್ಯಕ್ತಿಯೊಬ್ಬರ ಸ್ವಾಧೀನದ ಭೂಮಿಯಲ್ಲಿ ಅಕ್ರಮವಾಗಿ ಗುಂಪು ಸೇರಿ ಶರಾಬು ಸೇವನೆ ಮಾಡಿರುವುದನ್ನು ಆಕ್ಷೇಪಿಸಿದ್ದಕ್ಕೆ ಕೈ ಕೋಲುಗಳಿಂದ ಹೊಡೆದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ದೇವಪ್ಪ ಎಂಬವರು ಹಲ್ಲೆಗೀಡಾಗಿದ್ದು, ಇವರಿಗೆ ಸದಾನಂದ, ಪದ್ಮನಾಭ, ಪ್ರಭಾಕರ, ಗಂಗಾಧರ ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಉಪ್ಪಿನಂಗಡಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿನ್ನದ ಸರ ಕಳವು
ಉಪ್ಪಿನಂಗಡಿ: ಬಸ್ನಲ್ಲಿ ಸಂಚರಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಎರಡು ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಕದ್ದೊಯ್ದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಕೊಡಿಂಬಾಡಿ ಗ್ರಾಮದ ನಿವಾಸಿಯಾಗಿರುವ ನಾಗಮ್ಮ ಎಂಬವರು ಪುತ್ತೂರು - ಉಪ್ಪಿನಂಗಡಿ ಬಸ್ಸಿನಲ್ಲಿ ಪ್ರಯಾಣಿಸಿ 34 ನೇ ನೆಕ್ಕಿಲಾಡಿಯ ಶಿವಾಜಿನಗರ ಎಂಬಲ್ಲಿ ಇಳಿಯುತ್ತಿದ್ದಂತೆಯೇ ತನ್ನ ಕುತ್ತಿಗೆಯಲ್ಲಿನ ಕರಿಮಣಿ ಸರ ಕಳವುಗೈದ ವಿಚಾರ ತಿಳಿದು ಕಂಗಾಲಾದರು. ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಬಂದು ಸರಕಳ್ಳತನ ಮಾಡುವ ತಂಡೆ ಮತ್ತೆ ಸಕ್ರಿಯವಾಗಿರುವ ಬಗ್ಗೆ ನಾಗರಿಕರು ಕಳವಳ ವ್ಯಕ್ತ ಪಡಿಸಿದ್ದಾರೆ.
ಕಾರು ಡಿಕ್ಕಿ: ಬೈಕ್ ಸವಾರ ಗಂಭೀರ
ಉಪ್ಪಿನಂಗಡಿ: ಇಲ್ಲಿನ ಸಮೀಪದ ಬಜತ್ತೂರು ಎಂಬಲ್ಲಿ ಬೈಕ್ ಮತ್ತು ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸುನಿಲ್ (40) ಎಂಬವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ಗಾಯಾಳು ಇಳಂತಿಲ ಪರಿಸರದ ನಿವಾಸಿಯಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತ: ಐವರಿಗೆ ಗಾಯ
ಉಪ್ಪಿನಂಗಡಿ: ಇಲ್ಲಿನ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಕಡೆಂಬಿಲ ಸೇತುವೆ ಬಳಿ ಓಮ್ನಿ ಮತ್ತು ಟಾಟಾ ಆಟೋ ಮುಖಾಮುಖಿ ಡಿಕ್ಕಿಯಾಗಿ 5 ಜನ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಗುಂಡ್ಯ ಕಡೆಯಿಂದ ಓಮ್ನಿ ಬರುತ್ತಿದ್ದು ಎದುರುಗಡೆಯಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಿಂದ ಕಾರಿನಲ್ಲಿದ್ದ ಜಯಂತ (25), ರಾಜಪ್ಪ (23) ಅಟೋದಲ್ಲಿದ್ದ ಸಾರಮ್ಮ (51) ಸಾರಮ್ಮ (55) ಜೋಸೆಫ್ (58) ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ನೆಲ್ಯಾಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

