ದಕ್ಷಿಣ ಕನ್ನಡ

ಜೆಡಿಎಸ್ ಅಭ್ಯರ್ಥಿ ಚೆಂಗಪ್ಪ ನಾಮಪತ್ರ

Published On :

ಮಂಗಳೂರು: ದಕ್ಷಿಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ಮಂಗಳವಾರ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
 ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಚೆಂಗಪ್ಪ, ಭ್ರಷ್ಟಾಚಾರ, ಭೂಹಗರಣ, ಅಕ್ರಮ ಗಣಿಗಾರಿಕೆಯಿಂದ ಜನರು ರೋಸಿ ಹೋಗಿದ್ದಾರೆ. ಕೇಂದ್ರ ಕಾಂಗ್ರೆಸ್ ಸರ್ಕಾರ ಬಹುಕೋಟಿ ಹಗರಣಗಳಲ್ಲಿ ಮುಳುಗಿ ಹೋಗಿದೆ. ಇದನ್ನು ಗಮನಿಸುತ್ತಿರುವ ರಾಜ್ಯದ ಜನತೆ ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ವಸಂತ ಪೂಜಾರಿ, ಸುಶೀಲ್ ನರೋನ್ಹ, ಮುನೀರ್ ಮುಕ್ಕಚ್ಚೇರಿ, ಗೋಪಾಲಕೃಷ್ಣ ಅತ್ತಾವರ, ರತ್ನಾಕರ ಸುವರ್ಣ ಇತರರು ಇದ್ದರು. ಜೆಡಿಎಸ್ ಪಕ್ಷದ ಒಳಗಿನ ಭಿನ್ನಾಭಿಪ್ರಾಯ, ಗಲಾಟೆ ಹಿನ್ನೆಲೆಯಲ್ಲಿ ಮಂಗಳವಾರ ಚೆಂಗಪ್ಪ ನಾಮಪತ್ರ ಸಲ್ಲಿಸುವ ವೇಳೆ ಬಿಗು ಪೊಲೀಸ್ ಬಂದೋಬಸ್ತ್ ಇತ್ತು.
ಡಿ.ಎಂ.ಅಸ್ಲಂ ಸವಾಲು: ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಅಲ್ಪಸಂಖ್ಯಾತ ಮುಖಂಡ ಡಿ.ಎಂ. ಅಸ್ಲಂ ಅಭ್ಯರ್ಥಿ ಆಯ್ಕೆ ಬಗ್ಗೆ ಅಪಸ್ವರ ವ್ಯಕ್ತಪಡಿಸಿದರು. ಚೆಂಗಪ್ಪ ಅವರು 1 ಸಾವಿರ ಮತ ಪಡೆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಅಸ್ಲಂ ಸವಾಲು ಹಾಕಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.