ದಕ್ಷಿಣ ಕನ್ನಡ

ಉಚಿತ ತರಬೇತಿ ಅರ್ಜಿ ಆಹ್ವಾನ

Published On :

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪಂಗಡದ ಮಹಿಳಾ ಅಭ್ಯರ್ಥಿಗಳಿಂದ 6 ತಿಂಗಳ ಟೈಲರಿಂಗ್, ಪ್ಯಾಶನ್ ಡಿಸೈನಿಂಗ್, 4 ತಿಂಗಳ ಸಿದ್ಧ ಉಡುಪುಗಳ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ-ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಆಯೋಜಿಸಿರುವ ತರಬೇತಿಯು ಉಚಿತವಾಗಿದೆ. ಸರ್ಕಾರದ ವಿವಿಧ ಯೋಜನೆಯಡಿ ತರಬೇತಿ ಪೂರ್ಣಗೊಂಡ ಪ್ರತಿ ಅಭ್ಯರ್ಥಿಗಳಿಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ಕಲ್ಪಿಸಲಾಗುವುದು. ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣ, ಅನುತ್ತೀರ್ಣರಾದ ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಆಸಕ್ತ ಮಹಿಳಾ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಹಾಗೂ ಪಡಿತರ ಚೀಟಿ ಪ್ರತಿ, ತಮ್ಮ ಹೆಸರು, ವಿಳಾಸ, ವಯಸ್ಸು, ವಿವರಗಳನ್ನು ಬಿಳಿ ಹಾಳೆಯಲ್ಲಿ ಬರೆದು ಕಳುಹಿಸಬೇಕು. ಏ. 30 ಕೊನೆ ದಿನ. ಅರ್ಜಿಯನ್ನು ಮೋಹನಾಂಗಯ್ಯ ಸ್ವಾಮಿ, ಅಧ್ಯಕ್ಷರು, ಪರಿಶಿಷ್ಟ ಜಾತಿ-ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಸೇವಾಕೇಂದ್ರ ಲೇಡಿಹಿಲ್, ಅಶೋಕ ನಗರ ಮಂಗಳೂರು-575006 ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಿದ್ದರಾಮಯ್ಯ ಯಾರು ?
ಮಂಗಳೂರು: ಬಾಂಬ್ ಸ್ಫೋಟದ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಹೇಳಲು ಸಿದ್ದರಾಮಯ್ಯ ಯಾರು? ಬಾಂಬ್ ಇಡುವಾಗ ಅವರು ಅಲ್ಲಿದ್ದರೇ? ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಕೇಳಿದ್ದಾರೆ.
 ಬುಧವಾರ ಮಾಧ್ಯಮ ಜತೆ ಮಾತನಾಡಿದ ಪೂಜಾರಿ, ಯಾರೂ ಪರಸ್ಪರ ಆರೋಪಿಸಬಾರದು. ಹೆಬ್ಬಾಳದಲ್ಲಿ ಬಾಂಬ್ ಸ್ಫೋಟ ಆಗಿದೆ ಎನ್ನುವುದದೂ ಕೂಡ ವದಂತಿ. ಪೊಲೀಸರು ತನಿಖೆ ಮಾಡಲು ಬಿಡಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.