ದಕ್ಷಿಣ ಕನ್ನಡ

ಬಿಜೆಪಿ ಬೆಳವಣಿಗೆ ಸಹಿಸದೆ ಕಚೇರಿ ಬಳಿ ಬಾಂಬ್ ಸ್ಫೋಟ: ಡೀವಿ

Published On :

ಪುತ್ತೂರು: ಬಿಜೆಪಿಯ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕಚೇರಿಯ ಬಳಿ ಬಾಂಬ್ ಸ್ಫೋಟಿಸುವ ಷಡ್ಯಂತ್ರ ನಡೆಸಲಾಗಿದ್ದು, ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಇಲ್ಲಿನ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭ ಹಾಜರಿದ್ದ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಕ್ಷವನ್ನು ವಿಚಲಿತಗೊಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ಆದರೆ ಇದರಿಂದ ಕಾರ್ಯಕರ್ತರು ವಿಚಲಿತರಾಗಬೇಕಾದ ಆವಶ್ಯಕತೆಯಿಲ್ಲ ಎಂದು ಸದಾನಂದ ಗೌಡ ತಿಳಿಸಿದರು.
ಈ ಬಾರಿ ಕಳಂಕಿತರಿಲ್ಲ: ಬಿಜೆಪಿಯ ಕಳೆದ 2 ವರ್ಷಗಳ ಆಡಳಿತದಲ್ಲಿ ಯಾವುದೇ ಕಪ್ಪು ಚುಕ್ಕೆಗಳಿಲ್ಲ ಎಂದ ಅವರು ಹಿಂದೆ ಪಕ್ಷದಲ್ಲಿ ಭ್ರಷ್ಟಾಚಾರ ನಡೆಸಿದವರು ಮತ್ತು ಕಳಂಕಿತರು ಪಕ್ಷ ಬಿಟ್ಟು ಹೋಗಿದ್ದಾರೆ. ಈ ಬಾರಿ ಯಾವುದೇ ಕಳಂಕಿತರಿಗೆ ಪಕ್ಷ ಟಿಕೆಟು ನೀಡಿಲ್ಲ ಎಂದ ಡೀವಿ ತಾನು ಮುಖ್ಯಮಂತ್ರಿಯಾದ ಬಳಿಕ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.