ಚದುರಂಗ ತರಬೇತುದಾರ ಚುನಾವಣೆ ಕಣಕ್ಕೆ
ಮಂಗಳೂರು: ಪಿರಮಿಡ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ವಿಧಾನಸಭಾ ಚುನಾವಣಾ ಅಭ್ಯರ್ಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಡೆರಿಕ್ ಪಿಂಟೊ ಸ್ಪರ್ಧಿಸಲಿದ್ದಾರೆ.
ಡೆರಿಕ್ ಪಿಂಟೋ ಅವರು ಡೆರಿಕ್ಸ್ ಚೆಸ್ ಸ್ಕೂಲ್ನ ತರಬೇತಿಗಾರ. ರಾಜಕೀಯ ಅದಃಪತನದ ಸಂದರ್ಭ ಮಾನವೀಯ ಸ್ಪರ್ಶವುಳ್ಳ ಮೌಲ್ಯಾಧಾರಿತ ರಾಜಕಾರಣವನ್ನು ನೀಡುವ ಉದ್ದೇಶ ಡೆರಿಕ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಕೆ. ಗುರುಪ್ರಸಾದ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ 19 ಕ್ಷೇತ್ರದಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ಪಾರ್ಟಿ ರಿಜಿಸ್ಟ್ರೇಶನ್ ಹೊಂದಿದೆ ಎಂದರು. ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶ, ಲಿಂಗ ಬೇಧವಿಲ್ಲದೆ ಎಲ್ಲರಿಗೂ ರಕ್ಷಣೆ ಮತ್ತು ಭದ್ರತೆ ನೀಡುವುದು, ಸಾರ್ವಜನಿಕ ಮೂಲಭೂತ ಸೌಲಭ್ಯಗಳ ನಿರಂತರ ಸೇವೆ, ಮಂಗಳೂರನ್ನು ಜಾಗತಿಕ ಪ್ರವಾಸಿ ತಾಣವಾಗಿ ರೂಪಿಸುವುದು ಪಕ್ಷದ ಉದ್ದೇಶವಾಗಿದೆ ಎಂದು ಪಕ್ಷದ ಅಭ್ಯರ್ಥಿ ಡೆರಿಕ್ ಪಿಂಟೋ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

