ಮಠಂದೂರು ಕುಟುಂಬದಲ್ಲಿ ರು. 1.26 ಕೋಟಿ ಮೌಲ್ಯದ ಆಸ್ತಿ
ಪುತ್ತೂರು: ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರ ಕುಟುಂಬ ಚರಾಸ್ತಿ ಮತ್ತು ಸ್ಥಿರಾಸ್ತಿ ಸೇರಿದಂತೆ ಒಟ್ಟು ರು. 1.26 ಕೋಟಿ ಮೌಲ್ಯದ ಸೊತ್ತುಗಳನ್ನು ಹೊಂದಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೈಯಲ್ಲಿ ರು. 16 ಸಾವಿರ ನಗದು ಹಣ, 10 ಗ್ರಾಂ ಚಿನ್ನ, ಪತ್ನಿಯ ಬಳಿ 10 ಸಾವಿರ ರೂಪಾಯಿ, ರು. 4,60 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಹಾಗೂ ಪುತ್ರಿಯ ಬಳಿ 40 ಗ್ರಾಂ ಚಿನ್ನಾಭರಣ ಇರುವುದಾಗಿ ಅವರು ಸಲ್ಲಿಸಿರುವ ಅಫಿದಾವಿತ್ನಲ್ಲಿ ತಿಳಿಸಿದ್ದಾರೆ. ಸಂಜೀವ ಮಠಂದೂರು ಅವರು ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದಲ್ಲಿ ಪಿತ್ರಾರ್ಜಿತ ಕೃಷಿ ಭೂಮಿ ಹಾಗೂ ಸ್ವಯಾರ್ಜಿತ ಕೃಷಿಭೂಮಿ ಸೇರಿದಂತೆ ಒಟ್ಟು ರೂ. 40 ಲಕ್ಷ ಮೌಲ್ಯದ 4.73 ಎಕ್ರೆ ಆಸ್ತಿ ಹೊಂದಿದ್ದಾರೆ. ಅಲ್ಲದೆ ಕೃಷಿಯೇತರ ಭೂಮಿ, ವಸತಿ ಕಟ್ಟಡ ಸೇರಿ ಒಟ್ಟು 75 ಲಕ್ಷ ರೂಪಾಯಿ ಮೌಲ್ಯದ ಸ್ಥಿರಾಸ್ತಿ ,ಒಂದು ಮಾರುತಿ ಓಮ್ನಿ ಕಾರು ಹೊಂದಿದ್ದಾರೆ. ವಿವಿಧ ಬ್ಯಾಂಕ್ಗಳಲ್ಲಿ ಸೇರಿ ಒಟ್ಟು 11.66 ಲಕ್ಷ ರುಪಾಯಿ ಸಾಲ. ಹಾಗೂ ಪುತ್ರಿಯ ಹೆಸರಲ್ಲಿ ಶಿಕ್ಷಣ ಸಾಲವಿದೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿರುವ ಅಫಿದಾವಿತ್ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

