ಯುವಕ ಆತ್ಮಹತ್ಯೆ
ಮಂಗಳೂರು: ಡೊಂಗರಕೇರಿ ಕಟ್ಟೆಮಾರು ಬಳಿ ಅಪಾರ್ಟ್ಮೆಂಟ್ ನಿವಾಸಿ ಮನೋಜ್(25) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ವರದಿಯಾಗಿದೆ. ಮನೆಯೊಳಗೆ ಈ ಕೃತ್ಯವೆಸಗಿದ್ದು ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಕದ್ರಿ ಪೊಲೀಸರು ದೂರು ದಾಖಲಿಸಿದ್ದಾರೆ.
ಅಪರಿಚಿತ ಶವ ಪತ್ತೆ
ಮಂಗಳೂರು: ನಗರದ ನೀರೇಶ್ವಾಲ್ಯ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಶನಿವಾರ ಪತ್ತೆಯಾಗಿದೆ. ಈತ ಕೇರಳ ಕಣ್ಣೂರು ನಿವಾಸಿ ಅಜೀಝ್(38) ಎಂದು ಹೇಳಲಾಗುತ್ತಿದೆ. ಶವವನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈತನ ಬಗ್ಗೆ ಮಾಹಿತಿ ಇರುವವರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಯುವತಿ ಹತ್ಯೆ: ಇಬ್ಬರ ವಿಚಾರಣೆ
ಮಂಗಳೂರು: ನಗರದ ಬ್ಯಾಂಕೊಂದರ ಸಹಾಯಕ ಮೆನೇಜರ್ ಅಂಜನಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಮಹೇಶ್ನ ಸಹಚರ ರವಿ ಹಾಗೂ ಇನ್ನೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹೇಶ್ ಜತೆ ಪ್ರಣಯ ಹೊಂದಿದ್ದ ಅಂಜನಾ, ಅದೇ ಮನೆಯಲ್ಲಿ ಕೊಲೆಗೈಯಲ್ಪಟ್ಟಿದ್ದಳು. ಈ ಸಂದರ್ಭ ಅಂಜನಾಳ ಚಿನ್ನದ ಸರ, ಮೊಬೈಲ್, ವ್ಯಾನಿಟಿ ಬ್ಯಾಗ್ ನಾಪತ್ತೆಯಾಗಿತ್ತು. ಬಳಿಕ ಮಹೇಶ್ ಕೂಡ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

