ಪುತ್ತೂರಿನ ಅಭಿವೃದ್ಧಿ ಗೆಲವಿಗೆ ಸಹಕಾರಿ'
ಪುತ್ತೂರು: ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಅವಧಿಯಲ್ಲಿ ಪುತ್ತೂರಿನಲ್ಲಿ ನಡೆದಿರುವ ಅಭಿವೃದ್ಧಿ ಕೆಲಸಗಳು ಹಾಗೂ ಸರ್ಕಾರದ ಸಾಧನೆಯೇ ತನ್ನ ಗೆಲವಿಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಹೇಳಿದರು.
ಅವರು ಸೋಮವಾರ ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಈಗಾಗಲೇ ತಾನು ಪುತ್ತೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ 45 ಗ್ರಾಮಗಳ 202 ಬೂತುಗಳಲ್ಲಿ ಪ್ರಥಮ ಸುತ್ತಿನ ಪ್ರವಾಸ ಕೈಗೊಳ್ಳಲಾಗಿದೆ. ಎಲ್ಲಾ ಕಡೆಗಳಲ್ಲಿಯೂ ಬಿಜೆಪಿ ಪರ ಜನತೆಯ ಒಲವಿದೆ. ರಾಜಕೀಯ ಅನುಭವವಿಲ್ಲದಿದ್ದರೂ ಶಾಸಕಿ ಮಲ್ಲಿಕಾ ಪ್ರಸಾದ್ ಮಾಡಿರುವ ಉತ್ತಮ ಸಾಧನೆ. ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದ ಮಲ್ಲಿಕಾ ಪ್ರಸಾದ್ ಅವರು ತನಗೆ ಮತ್ತೊಮ್ಮೆ ಅವಕಾಶವಿದ್ದರೂ ಅಧಿಕಾರದ ಆಶೆಯಿಲ್ಲದೆ ಹೊಸ ಕಾರ್ಯಕರ್ತರು ಬೆಳೆಯಬೇಕೆಂಬ ಆಶಯದೊಂದಿಗೆ ತನಗೆ ಅವಕಾಶ ನೀಡಿದ್ದಾರೆ. ಹೊಸತನಕ್ಕೆ ಅವಕಾಶ ನೀಡಿರುವ ಅವರು ಮಾದರಿಯಾಗಿದ್ದಾರೆ ಎಂದರು.
ಪುತ್ತೂರಿನ ಜನತೆ ನೆಮ್ಮದಿ ಜೀವನ ಬಯಸುವವರಾಗಿದ್ದು, ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ನಡೆಯುತ್ತಿದ್ದ ಗೂಂಡಾಗಿರಿ ಮರುಕಳಿಸದಿರುವಂತಾಗಲು ಬಿಜೆಪಿಯನ್ನು ಜನತೆ ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಹಿಂದೆ ಇರುವವರು ಯಾರು ಎಂಬುದು ಈಗಾಗಲೇ ಮತದಾರರಿಗೆ ಅರಿವಾಗಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
ಪುತ್ತೂರಿನ ಜನತೆ ನೆಮ್ಮದಿ ಜೀವನ ಬಯಸುವವರಾಗಿದ್ದು, ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ನಡೆಯುತ್ತಿದ್ದ ಗೂಂಡಾಗಿರಿ ಮರುಕಳಿಸದಿರುವಂತಾಗಲು ಬಿಜೆಪಿಯನ್ನು ಜನತೆ ಬೆಂಬಲಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

