ಪ್ರಚಾರಕ್ಕೆ ಕಾಂಗ್ರೆಸ್‌ಗೆ ಮುಜುಗರ: ಕೋಟ
ಮಂಗಳೂರು: ಕರ್ನಾಟಕದಲ್ಲಿ ಈಗ ಬಿಜೆಪಿ ಸ್ವಚ್ಛವಾಗಿದೆ, ಹೀಗಿರುವಾಗ ಕೇಂದ್ರದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತುಕೊಂಡು ರಾಜ್ಯಕ್ಕೆ ಪ್ರಚಾರಕ್ಕೆ ಆಗಮಿಸಲು ಸೋನಿಯಾ, ರಾಹುಲ್, ಮನಮೋಹನ್ ಹಿಂದೇಟು ಹಾಕುತ್ತಿದ್ದಾರೆ ಎಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಹಕವಾಡಿದ್ದಾರೆ.
ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬಗಲಲ್ಲಿ ಭ್ರಷ್ಟಾಚಾರ ಇಟ್ಟುಕೊಂಡು ಕಾಂಗ್ರೆಸಿಗರಿಗೆ ಇನ್ನೊಬ್ಬರ ವಿರುದ್ಧ ಆರೋಪ ಮಾಡಲು ಹೇಗೆ ಸಾಧ್ಯ? ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಒಳಗಾದವರು ಈಗ ಬಿಜೆಪಿಯಲ್ಲಿ ಇಲ್ಲ. ಹಾಗಿರುವಾಗ ರಾಜ್ಯದಲ್ಲಿ ಭ್ರಷ್ಟಾಚಾರ ಬದಲು ಕೇಂದ್ರ ಭ್ರಷ್ಟಾಚಾರ ಕುರಿತು ಮಾತನಾಡುತ್ತಾರೆಯೇ ಎಂದು ಪ್ರಶ್ನಿಸಿದರು. ಆಡ್ವಾಣಿ ವಿರುದ್ಧ ಧನಂಜಯ ಕುಮಾರ್ ಮಾತನಾಡಿದ್ದಕ್ಕೆ ಕೆಜೆಪಿ ಮುಖಂಡ ಯಡಿಯೂರಪ್ಪ ಕ್ಷಮಾಪಣೆ ಕೋರಿದ್ದಾರೆ. ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರು ಆಡ್ವಾಣಿ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಸವಾಲು ಹಾಕಿದ್ದಾರೆ. ಒಂದು ವೇಳೆ ಪೂಜಾರಿ ಮಾತಿಗೆ ಸೋನಿಯಾ ಕ್ಷಮೆ ಕೇಳಿದರೆ ಪೂಜಾರಿ ಏನು ಮಾಡುತ್ತಾರೆ ಎಂದು ಪ್ರಶ್ನಿಸಿದ ಕೋಟ, ತನ್ನ ಹೇಳಿಕೆ ಬಗ್ಗೆ ಪೂಜಾರಿ ಪುನರ್ ಪರಿಶೀಲನೆ ಮಾಡಲಿ ಎಂದು ಕಿವಿ ಮಾತು ಹೇಳಿದರು.
ಬಿಜೆಪಿ ಸಾಧನೆ ಆಧಾರದಲ್ಲಿ ಮತ ಕೇಳಲಿದ್ದು, ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದು ರಾಜ್ಯ ಸರ್ಕಾರದ ಸಾಧನೆ ವಿವರಿಸಿದರು. ಮುಖಂಡರಾದ ಶ್ರೀಕರ ಪ್ರಭು, ರಾಜಗೋಪಾಲ ರೈ, ನಿತಿನ್ ಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

