ಮಂಗಳೂರು: 27ರಂದು 'ಹಿರಿಯರ ಬೇಸಿಗೆ ಕ್ರೀಡೆ'
ಮಂಗಳೂರು: ಸಹಾಯ ಮತ್ತು ಹಿರಿಯ ನಾಗರಿಕರ ಅಸೋಸಿಯೇಶನ್ ವತಿಯಿಂದ ಏ. 27 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಬಲ್ಮಠದ ಕಾಸೆಸ್ ಮೈದಾನದಲ್ಲಿ 'ಹಿರಿಯರ ಬೇಸಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವ' ನಡೆಯಲಿದೆ.
ಕಾರ್ಯಕ್ರಮವನ್ನು ಬೆಳಗ್ಗೆ 9.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಎ. ಶಕುಂತಲಾ ಅವರು ಉದ್ಘಾಟಿಸುವರು. ಸಂಜೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಜಿ.ಪಂ. ಸಿಇಒ ಡಾ.ಕೆ.ಎನ್. ವಿಜಯಪ್ರಕಾಶ್, ಆಥರ್ ಆಫ್ ವಿಶ್ವಾಸ್ ಟ್ರಸ್ಟ್‌ನ ಡಾ. ಒಲಿಂಡಾ ಪೆರೀರಾ, ಉದಯ ಪ್ರೆಸ್‌ನ ಆಡಳಿತ ನಿರ್ದೇಶಕ ಎಸ್. ನಾರಾಯಣ ರಾವ್ ಪಾಲ್ಗೊಳ್ಳುವರು ಎಂದು ಸಂಘದ ಕಾರ್ಯದರ್ಶಿ ಡಾ. ಹನಿಬಾಲ್ ಕಬ್ರಾಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹಿರಿಯ ನಾಗರಿಕರ ಮಧ್ಯೆ ಅನ್ಯೋನ್ಯತೆ ಸೃಷ್ಟಿಸುವುದು ಈ ಕಾರ್ಯಕ್ರಮ ಧ್ಯೇಯ. ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಓಟದ ಸ್ಪರ್ಧೆ, ಸಂಗೀತ ಕುರ್ಚಿ, ಬಾಸ್ ಪಾಸಿಂಗ್ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈಗಾಗಲೇ ಸುಮಾರು 100 ಮಂದಿ ಹೆಸರು ನೋಂದಾಯಿಸಿದ್ದು, 500 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕುಂಜೂರು ದೇವಾಲಯ ನವೀಕರಣ ಪುನಃ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ತಾಲೂಕಿನ ಕುಂಜೂರು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾಬಂಧ ಬ್ರಹ್ಮ ಕಲಶೋತ್ಸವವು ಈಗಾಗಲೇ ಅರಂಭಗೊಂಡಿದ್ದು, ಏ.29ರತನಕ ವಿವಿಧ ತಾಂತ್ರಿಕ, ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾಬಂಧ ಬ್ರಹ್ಮ ಕಲಶೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ನಡೆಯಲಿದೆ. ಪ್ರತಿದಿನ ಸಂಜೆ ಭಜನೆ, ಕರ್ನಾಟಕ ಶಾಸ್ತ್ರೀಯ ಸಂಗೀತ, ಭಕ್ತಿ ರಸಮಂಜರಿ, ಯಕ್ಷಗಾನ ಬಯಲಾಟ, ನೃತ್ಯ ವೈಭವ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಏ.24ರಂದು ಮಧ್ಯಾಹ್ನ 12.30ಕ್ಕೆ ಬ್ರಹ್ಮಕಲಶಾಭಿಷೇಕ, ಮಹಾಪೂಜೆ ವೈದಿಕ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಬ್ರಾಹ್ಮಣ ಹಸ್ತೋದಕ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ಅದೇ ದಿನ ರಾತ್ರಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಾಗೀಶ್ವರ ಶಾರದ ಲಕ್ಷ್ಮೀನರಸಿಂಹ ಸಂಸ್ಥಾನ ಬಾಳೆಕುದ್ರು ಮಠದ ನೃಸಿಂಹಾಶ್ರಮ ಮಹಾಸ್ವಾಮಿ ಆಶೀರ್ವಚನ ನೀಡಲಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಭಾಕರ ಭಟ್, ರಾಧಾಕೃಷ್ಣ ಕಲ್ಲೂರಾಯ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

