ದಕ್ಷಿಣ ಕನ್ನಡ

ಕ್ಯಾನ್ಸರ್ ಚಿಕಿತ್ಸೆಗೆ ವಿಮೆ ಒದಗಿಸಿ: ಡಾ. ಹೆಗ್ಗಡೆ

Published On :

ಮಂಗಳೂರು: ಕಾನ್ಸರ್ ಚಿಕಿತ್ಸೆಗೂ ವಿಮಾ ಕಂಪನಿಗಳು ವಿಮೆ ನೀಡಲು ಮುಂದಾಗಬೇಕು ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಬುಧವಾರ ಎಜೆ ಆಸ್ಪತ್ರೆಯಲ್ಲಿ  'ಎಜೆ ಕಾನ್ಸರ್ ಇನ್‌ಸ್ಟಿಟ್ಯೂಟ್‌' ಉದ್ಘಾಟಿಸಿ ಮಾತನಾಡಿದರು. ಇಂದು ಆಧುನಿಕ ತಂತ್ರಜ್ಞಾನದ ಮೂಲಕ ಚಿಕಿತ್ಸೆಗೆ ವ್ಯವಸ್ಥೆಯಿದ್ದರೂ, ಜನಸಾಮಾನ್ಯರಿಗೆ ಇದು ಎಟುಕುತ್ತಿಲ್ಲ. ವಿಮಾ ಕಂಪನಿಗಳು ಇವುಗಳ ಕುರಿತು ಚಿಂತಿಸುವ ಅಗತ್ಯವಿದೆ ಎಂದರು. ಗುಣಮಟ್ಟದ ಉತ್ತಮ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಮೂಲಕ ಅಧ್ಯಯನ ನಡೆಸುವ ವಿದ್ಯಾರ್ಥಿಗಳ ಶಿಕ್ಷಣಮಟ್ಟವೂ ಉತ್ತಮವಾಗಿರುತ್ತದೆ. ಇದಲ್ಲದೆ ವೈದ್ಯರೂ ಪ್ರಾಯೋಗಿಕ ಅನುಭವ ಪಡೆಯುವರು ಎಂದರು.  ಎಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಎಸ್. ಶ್ರೀಪ್ರಕಾಶ್, ಮಾಜಿ ಸಚಿವ ಅಮರನಾಥ ಶೆಟ್ಟಿ, ಕಾರ್ಪೊರೇಶನ್ ಬ್ಯಾಂಕಿನ ಆಡಳಿತ ನಿರ್ದೇಶಕ ಅಜಯ್ ಕುಮಾರ್, ಕಲ್ಲಿಕೋಟೆ ಮಲಬಾರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ಕೆ. ಕಾರ್ತಿಕೇಯ ವರ್ಮಾ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.