ದಕ್ಷಿಣ ಕನ್ನಡ

ಸುದ್ದಿ ಸಂಕ್ಷೇಪ

Published On :

ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ಬಂಧನ
ಬೈಂದೂರು:
ಇಲ್ಲಿನ ಯಡ್ತರೆ ಗ್ರಾಮದ ಹೊಸೂರು ಜಂಕ್ಷನ್ ಸಮೀಪ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೊಸೂರು ಕೇರಿಯ ಬಚ್ಚ ಮರಾಠಿ ಈತ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿರುವ ವಿಷಯ ತಿಳಿದ ಪೋಲಿಸರು ಆರೋಪಿಯನ್ನು ದಸ್ತಗಿರಿ ಮಾಡಿ ರು. 1200 ಮೌಲ್ಯದ 8 ಲೀಟರ್ ಮದ್ಯ ಸ್ವಾಧೀನಪಡಿಸಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಖಲೆರಹಿತ ರು. 5 ಲಕ್ಷ ವಶ
ಪಡುಬಿದ್ರಿ:
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಅಧಿಕೃತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು ರು. 5 ಲಕ್ಷವನ್ನು ಚುನಾವಣಾ ಆಯೋಗ ನೇಮಿಸಿರುವ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶುಕ್ರವಾರ ಸಂಜೆ ಉಡುಪಿ ನಗರದ ನಿವಾಸಿ ಸುರೇಶ ಪೂಜಾರಿ ಎಂಬವರು ಈ ಹಣವನ್ನು ತಮ್ಮ ಕಾರಿನಲ್ಲಿ ಮಂಗಳೂರಿಗೆ ಉಡುಪಿಗೆ ತೆಗೆದುಕೊಂಡು ಹೋಗುತ್ತಿದ್ದಾಗ, ರಾ.ಹೆ. 66ರ ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳಾದ ತ್ರಿನೇಶ್ವರ ಸಿ.ಪಿ. ವಶಪಡಿಸಿಕೊಂಡಿದ್ದಾರೆ. ಕಾರಿನ ಎಡಬದಿಯ ಡ್ಯಾಶ್ ಬೋರ್ಡ್‌ನಲ್ಲಿ ಒಂದು ಪ್ಲಾಸ್ಟಿಕ್ ಚೀಲದಲ್ಲಿ ಸಾವಿರ ರುಪಾಯಿ ನೋಟುಗಳ 5 ಕಟ್ಟುಗಳಿದ್ದು, ಈ ಬಗ್ಗೆ ಸುರೇಶ್ ಪೂಜಾರಿ ಅಧಿಕೃತ ದಾಖಲೆಗಳನ್ನು ಹಾಜರುಪಡಿಸುವಲ್ಲಿ ವಿಫಲರಾಗಿರುವುದರಿಂದ ಅವರ ಮೇಲೆ ದೂರು ದಾಖಲಿಸಲಾಗಿದೆ.

ಬಸ್- ಟಿಪ್ಪರ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ಮೂಲ್ಕಿ
: ಇಲ್ಲಿನ ಹಳೆಯಂಗಡಿ ಜಂಕ್ಷನ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗೆ ಪಕ್ಷಿಕೆರೆಯಿಂದ ಹಳೆಯಂಗಡಿಗೆ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಾದ ಗಣೇಶ್, ಅಬ್ದುಲ್ ಖಾದರ್ ಮತ್ತು ಸೋಹನ್‌ವಾಸ್‌ಗೆ ಗಂಭೀರ ಗಾಯವಾಗಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಡಮಂಗಲ: ಮದ್ಯ ವಶ
ಸುಳ್ಯ
: ಎಡಮಂಗಲ ಗ್ರಾಮದ ಕರುಣಾಕರ ಗೌಡ ಎಂಬವರು ಅಕ್ರಮ ಮದ್ಯ ಸಾಗಿಸುತ್ತಿದ್ದಾರೆಂಬ ಮಾಹಿತಿ ಪಡೆದ ಮಂಗಳೂರು ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳದ ಪೊಲೀಸರು ದಾಳಿ ನಡೆಸಿ ಮಾರಾಟ ಮಾಡಲು ತಂದಿದ್ದ ಮೈಸೂರು ಲ್ಯಾನ್ಸರ್ ವಿಸ್ಕಿಯ 26 ಬಾಟಲಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದಾನೆಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.