ದಕ್ಷಿಣ ಕನ್ನಡ

ಇಂದು 2ನೇ ತರಬೇತಿ

Published On :

ಮಂಗಳೂರು: ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಏ. 29 ರಂದು ನಡೆಯುವ 2ನೇ ತರಬೇತಿಗೆ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರತವಾಗಿರುವ ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಚುನಾವಣೆ ಕರ್ತವ್ಯಕ್ಕೆ ನಿಯೋಜಿತ ಎಲ್ಲ ಅಧಿಕಾರಿ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಅಂಚೆ ಮತ ಪತ್ರ ವಿತರಿಸಬೇಕಾಗಿತ್ತು. ಈಗಾಗಲೇ ಸಲ್ಲಿಸಿರುವ ಬೇಡಿಕೆ ಪತ್ರದಲ್ಲಿ ನಮೂದಿಸಿರುವ ಮತದಾರರ ಪಟ್ಟಿಯ ಭಾಗ ಸಂಖ್ಯೆ ಮತ್ತು ಕ್ರಮ ಸಂಖ್ಯೆಯನ್ನು ಪರಿಶೀಲಿಸಿ ಅಂಚೆ ಮತ ಪತ್ರ ನೀಡುವಲ್ಲಿ ತೊಂದರೆಯಾಗಿರುತ್ತದೆ.
ಮೇ 6ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಸೌಲಭ್ಯ ಕೇಂದ್ರವನ್ನು ಬೆಳಗ್ಗೆ 10 ರಿಂದ ಅಪರಾಹ್ನ 3ರ ತನಕ ಸ್ಥಾಪಿಸಲಾಗಿದೆ. ಇದರ ಪ್ರಯೋಜನವನ್ನು ಮತಗಟ್ಟೆ ಅಧಿಕಾರಿಗಳು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.