ದಕ್ಷಿಣ ಕನ್ನಡ

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಮತದಾನ ಅವಕಾಶಇಲ್ಲ: ಜಿಲ್ಲಾಧಿಕಾರಿ

Published On :

ಮಂಗಳೂರು: ಮೇ 5ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಮತದಾನಕ್ಕೆ ಅವಕಾಶ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಹರ್ಷಗುಪ್ತ ಹೇಳಿದ್ದಾರೆ.
ಸೋಮವಾರ ಜಿಲ್ಲಾ ಚುನಾವಣಾ ಕಾರ್ಯನಿರತ ಸಿಬ್ಬಂದಿಗಳಿಗೆ ವಿವಿಧ ಕಡೆ ನಡೆದ ತರಬೇತಿ ಕಾರ್ಯಕ್ರಮಕ್ಕೆ ಖುದ್ದು ತೆರಳಲು ಸಾಧ್ಯವಾಗದ ಕಾರಣ ಕಚೇರಿಯಿಂದಲೇ ವೈರ್‌ಲೆಸ್ ಮೂಲಕ ಏಕಕಾಲದಲ್ಲಿ ಸಂಪರ್ಕ ಪಡೆದು ಮಾತನಾಡಿದರು. ಫೋಟೋ ಇರುವ ಎಪಿಕ್ ಕಾರ್ಡ್ ಇದ್ದು, ಅವರ ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ ಮತದಾನಕ್ಕೆ ಅವಕಾಶ ಕೊಡಬಾರದು. ಪಟ್ಟಿಯಲ್ಲಿ ಹೆಸರಿದ್ದು, 23 ಗುರುತಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಮತಗಟ್ಟೆಯ ಅಧಿಕಾರಿಗಳಿಗೆ ಸಲ್ಲಿಸದಿದ್ದಲ್ಲಿ ಅಂತವರಿಗೂ ಮತದಾನಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು. ಜಿಲ್ಲಾಡಳಿತ ಚುನಾವಣೆ ಸಿಬ್ಬಂದಿಗಳ ಸಮಸ್ಯೆಯನ್ನು ಆಲಿಸಿ ಪರಿಹರಿಸಲು ಸಿದ್ಧವಾಗಿದೆ. ಆದ್ದರಿಂದ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ದೂರಗಳನ್ನು 1077ಕ್ಕೆ ಕರೆ ಮಾಡಿ ತಿಳಿಸಬಹುದಾಗಿದೆ. ಪೊಲೀಸ್, ಅರೆಸೇನಾ ಪಡೆ ಇನ್ನಿತರ ಸಿಬ್ಬಂದಿಯನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಿರುವ ಕಾರಣ ಕಾನೂನು ಸುವ್ಯವಸ್ಥೆ ಸಮಸ್ಯೆ ತಲೆದೊರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿಬ್ಬಂದಿ ಮೇ 4 ರಂದು ಬೆಳಗ್ಗೆ 6.30ಕ್ಕೆ ಸರಿಯಾಗಿ ಕೇಂದ್ರದಲ್ಲಿ ಹಾಜರಿರುವಂತೆ ತಿಳಿಸಿದರು. ಅಂಧ ಮತ್ತು ಅಶಕ್ತ ಮತದಾರರ ಸಹಾಯಕ್ಕಾಗಿ ಜೊತೆಯಲ್ಲಿ ಒಬ್ಬರು ಸಹಾಯಕರನ್ನು ಮತಗಟ್ಟೆಗೆ ಕರೆದೊಯ್ಯಲು ಅವಕಾಶವಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.