ದಕ್ಷಿಣ ಕನ್ನಡ

ನಾಳೆ ಸಚಿವ ಸೊರಕೆ ಪ್ರವಾಸ

Published On :

ಮಂಗಳೂರು: ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಆ. 4 ಮತ್ತು 5 ರಂದು ದ.ಕ. ಮತ್ತು ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಗ್ಗೆ 9.30ಕ್ಕೆ ಹೆಜಮಾಡಿ ಬಿಲ್ಲವ ಸಂಘದ ಯುವವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಬೆಳಗ್ಗೆ 11ಕ್ಕೆ ನಡೆಯುವ ಆಟಿದ ತಮ್ಮನದಲ್ಲಿ ಪಾಲ್ಗೊಳ್ಳುವರು. ಬೆಳಗ್ಗೆ 11.30ಕ್ಕೆ ಅಂಬೇಡ್ಕರ್ ಭವನದಲ್ಲಿ ನಡೆಯುವ ಕೂಲಿ ಕಾರ್ಮಿಕರಿಗೆ ಕಾನೂನು ಮಾಹಿತಿ ಶಿಬಿರದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 3ಕ್ಕೆ ಪೆರ್ಡೂರು ಬುಕ್ಕಿಗುಡ್ಡೆ ಕುಲಾಲ ಸಂಘದಲ್ಲಿ ವಿದ್ಯಾರ್ಥಿ ವೇತನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆ. 5 ರಂದು ಬೆಳಗ್ಗೆ 9ಕ್ಕೆ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜ್ ಸನ್ಮಾನ ಕಾರ್ಯಕ್ರಮ  ಮತ್ತು ಪುರಸಭೆ ಕಾರ್ಯಾಲಯದಲ್ಲಿ ಬೆಳಗ್ಗೆ 11.30ಕ್ಕೆ ಎಲ್ಲ ಅಧಿಕಾರಿಗಳ ಸಭೆ ಪಾಲ್ಗೊಳ್ಳುವರು. ಮಧ್ಯಾಹ್ನ 12ಕ್ಕೆ ಪುತ್ತೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿ ಹಾಗೂ ಕುಂದುಕೊರತೆ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3ಕ್ಕೆ ನೆಲ್ಯಾಡಿ ಕಾರ್ಯಕರ್ತರ ಸಭೆ ಹಾಗೂ ಸಂಜೆ 6ಕ್ಕೆ ಪುತ್ತೂರು ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳುವರು. ರಾತ್ರಿ ಉಡುಪಿಗೆ ನಿರ್ಗಮಿಸುವರು.
ನಾಳೆ ದಂತ
ಉಚಿತ ತಪಾಸಣೆ
ಮಂಗಳೂರು: ಕದ್ರಿ ಮಂಗಳಾ ಆಸ್ಪತ್ರೆ ಮತ್ತು ಮಂಗಳಾ ಕಿಡ್ನಿ ಪೌಂಡೇಶನ್ ಚಿಕಿತ್ಸಾ ವಿಭಾಗದ ವತಿಯಿಂದ ಆ. 4 ರಂದು ಆಸ್ಪತ್ರೆಯಲ್ಲಿ ಉಚಿತ ದಂತ ತಪಾಸಣೆ ಶಿಬಿರ ನಡೆಯಲಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ಶಿಬಿರ ನಡೆಯಲಿದೆ. ತಪಾಸಣೆಯಲ್ಲಿ ವಕ್ರ ದಂತ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನಡೆಸಲಾಗುವುದು ಎಂದು ದಂತ ವೈದ್ಯೆ ಡಾ. ಚೈತ್ರಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.