ದಕ್ಷಿಣ ಕನ್ನಡ

ಪುತ್ತೂರು ಬಾಲವನ ಅಭಿವೃದ್ಧಿಗೆ ವಿಶೇಷ ಕಾಳಜಿ: ಶಕುಂತಳಾ ಶೆಟ್ಟಿ

Published On :

ಪುತ್ತೂರು: ಪಟ್ಟಣದ ಬಾಲವನದಲ್ಲಿರುವ ಡಾ. ಶಿವರಾಮ ಕಾರಂತರ ಮನೆಯನ್ನು ಮೂಲ ಸ್ಥಾನದಲ್ಲೇ ದುರಸ್ತಿಗೊಳಿಸುವ ಮೂಲಕ ಪುನರ್ ನಿರ್ಮಿಸಲು ಸರ್ಕಾರ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಲಿದೆ. ಬಾಲವನದ ಅಭಿವೃದ್ಧಿಗೆ ಸರ್ಕಾರ ವಿಶೇಷ ಮುತುವರ್ಜಿ ವಹಿಸಲಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದರು.
ಪುತ್ತೂರಿನ ಬಾಲವನದಲ್ಲಿ  ಭಾನುವಾರ ಇ- ಗ್ರಂಥಾಲಯ ಮತ್ತು ವಾಚನಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲವನದ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಲು ತಾನು ಸರ್ಕಾರದ ಜೊತೆ ಮಾತನಾಡುವುದಾಗಿ ತಿಳಿಸಿದ ಅವರು ಬಾಲವನಕ್ಕೆ ಜನತೆ ಬರುವಂತಾಗಬೇಕು ಎಂದರು.
ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್, ಬಾಲವನಕ್ಕೆ ವಾರ್ಷಿಕವಾಗಿ ರು. 50 ಲಕ್ಷ ಅನುದಾನ ಬರುವಂತೆ ಶಾಸಕಿಯವರು ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಆಗ್ರಹಿಸಿದರು.
ಪುಸ್ತಕದ ಸ್ನೇಹದಿಂದ, ಪುಸ್ತಕದ ಪ್ರೀತಿಯಿಂದ ಯಾರೂ ಕೆಟ್ಟಿಲ್ಲ.
ಸಾಹಿತ್ಯ ಕ್ಷೇತ್ರದಲ್ಲಿ ಮತ್ತು ಇತರ ಕ್ಷೇತ್ರಗಳಲ್ಲಿ ಉದ್ಧಾರ ಆಗಿದ್ದಾರೆ ಎಂದ ಅವರು ಪುಸ್ತಕದೊಂದಿಗೆ ಜನರು ಸ್ನೇಹ ಬೆಳೆಸಿಕೊಳ್ಳಬೇಕೆಂದು ಕರೆಯಿತ್ತರು.
ಈ ಸಂದರ್ಭದಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಬಾಲವನದ ವತಿಯಿಂದ ಸನ್ಮಾನಿಸಲಾಯಿತು.
ಪುತ್ತೂರಿನ ಉಪವಿಭಾಗಾಧಿಕಾರಿ ಮತ್ತು ಬಾಲವನ ಅಭಿವಣದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಸನ್ನ, ತಹಸೀಲ್ದಾರ್ ಕುಳ್ಳೇಗೌಡ, ಪುರಸಭಾ ಮುಖ್ಯಾಧಿಕಾರಿ ಸುಧಾಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್, ಚಂದ್ರ ತಳೂರು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.