ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್ಚುವರಿ ಪೊಲೀಸ್ ಆಯುಕ್ತ ಭರವಸೆ
ಬಂಟ್ವಾಳ: ಸಮಾಜದ ಶಾಂತಿ, ಸೌಹಾರ್ದತೆ ಕದಡುವ ವ್ಯಕ್ತಿಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಕಟಿಬದ್ಧವಾಗಿದೆ ಎಂದು ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್ ಆಯುಕ್ತ ಟಿ. ಶಿವಕುಮಾರ್ ಹೇಳಿದರು.
ಮಂಗಳವಾರ ಬಿ.ಸಿ. ರೋಡಿನ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.
ಕಾನೂನುಬಾಹಿರವಾಗಿ ಜಾನುವಾರು ಸಾಗಣೆ ಮಾಡುವವರ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದ ಅವರು, ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಲು ಮುಂದಾಗಬಾರದು ಎಂದು ಮನವಿ ಮಾಡಿದರು.
ಹಬ್ಬದ ಸಂದರ್ಭಗಳಲ್ಲಿ ಮಾತ್ರ ಶಾಂತಿ ಸೌಹಾರ್ದತೆ ಕಾಪಾಡುವುದಲ್ಲ. ಈ ಬಗ್ಗೆ ಪ್ರತಿ ತಿಂಗಳು ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಸಭೆ ನಡೆಸಬೇಕು. ಶಾಶ್ವತವಾಗಿ ಶಾಂತಿ ನೆಲೆಸಲು ಸಹಕರಿಸಬೇಕು ಎಂದು ಪುರಸಭಾ ಸದಸ್ಯ ಸದಾಶಿವ ಬಂಗೇರ ಸಲಹೆ ನೀಡಿದರು.
ದನ ಸಾಗಾಟ ವಿರುದ್ಧ ಕ್ರಮ: ಅಕ್ರಮ ದನ ಸಾಗಣೆ ಮಾಡುವವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
ಈ ಬಗ್ಗೆ ಪೊಲೀಸ್ ಇಲಾಖೆ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯ ಮಹಮ್ಮದ್ ಶರೀಫ್ ಆಗ್ರಹಿಸಿದರು.
ಹಟ್ಟಿಯಿಂದಲೇ ದನಕಳ್ಳತನ ನಡೆಸುವ ಪ್ರಕರಣ ಹೆಚ್ಚಾಗುತ್ತಿದೆ. ಕದಿಯುವವರು ಯಾರು, ಮಾರುವವರು ಯಾರು ಎನ್ನುವುದು ಪೊಲೀಸ್ ಇಲಾಖೆಗೆ ಚೆನ್ನಾಗಿ ಗೊತ್ತಿದೆ.
ಕಳ್ಳನನ್ನು ಸಾರ್ವಜನಿಕರೇ ಹಿಡಿದರೆ ಅದು ನೈತಿಕ ಪೊಲೀಸ್‌ಗಿರಿಯಾಗುತ್ತದೆ. ಆದ್ದರಿಂದ ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಹಿಂದೂ ಮುಸ್ಲಿಂ ಸೌಹಾರ್ದತೆ ಉಳಿಯಬೇಕೆಂದರೆ ಜಾನುವಾರು ಕಳ್ಳರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಮಂಜುನಾಥ ಡಿ. ಶೆಟ್ಟಿ ಅವರು ಹೇಳಿದರು.
ನಗರ ಠಾಣಾ ಎಸೈ ಶೇಖರ್ ಸ್ವಾಗತಿಸಿ, ಗ್ರಾಮಾಂತರ ಠಾಣಾ ಎಸೈ ಮಹೇಶ್ ಪ್ರಸಾದ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

