ದಕ್ಷಿಣ ಕನ್ನಡ

ರಥಬೀದಿ ರಸ್ತೆಗೆ ಕುರುಂಜಿಯವರ ಹೆಸರಿಡಲು ಮನವಿ

Published On :

ಸುಳ್ಯ: ಇಲ್ಲಿನ ರಥಬೀದಿ ಕ್ರಾಸ್‌ನಿಂದ ಕುರುಂಜಿಭಾಗ್‌ವರೆಗಿನ ರಸ್ತೆಗೆ ಸುಳ್ಯದ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹೆಸರಿಡಬೇಕು ಎಂದು ಸುಳ್ಯ ನಗರ ಪಂಚಾಯಿತಿಗೆ ಮನವಿ ಸಲ್ಲಿಸಲು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ನಿರ್ಣಯ ಕೈಗೊಂಡಿದೆ.
ಬುಧವಾರ ಅಗಲಿದ ಡಾ. ಕುರುಂಜಿ ವೆಂಕಟ್ರಮಣ ಗೌಡರಿಗೆ ಸಂಘದ ವತಿಯಿಂದ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮಾಂತರ ಕಾರ್ಯದರ್ಶಿ ಹರೀಶ್ ಬಂಟ್ವಾಳ್ ಕುರುಂಜಿಯವರ ಭಾವಚಿತ್ರಕ್ಕೆ ಪುಷ್ಪ ಮಾಲೆ ತೊಡಿಸಿದರು. ಬಳಿಕ ಮಾತನಾಡಿದ ಅವರು, ಕುರುಂಜಿಯ ಅಕ್ಷರ, ಆರೋಗ್ಯ ಮತ್ತು ಅರಿವಿನ ಕ್ರಾಂತಿಯನ್ನು ವಿವರಿಸಿದರು.
ಸಂಘದ ಅಧ್ಯಕ್ಷ ಗಿರೀಶ್ ಪೆರುಮುಂಡ ಅಧ್ಯಕ್ಷತೆ ವಹಿಸಿದ್ದರು. ಜೆ.ಕೆ. ರೈ, ಗಂಗಾಧರ ಮಟ್ಟಿ, ಜಯಪ್ರಕಾಶ್ ಕುಕ್ಕೇಟಿ, ದುರ್ಗಾಕುಮಾರ್ ನಾಯರ್‌ಕೆರೆ, ಲೋಕೇಶ್ ಪೆರ್ಲಂಪಾಡಿ, ಚೇತನ್‌ರಾಮ್ ಇರಂತಕಜೆ, ಗಂಗಾಧರ ಕಲ್ಲಪಳ್ಳಿ, ಕೃಷ್ಣ ಬೆಟ್ಟ, ಗಿರೀಶ್ ಅಡ್ಪಂಗಾಯ, ಶಿವಪ್ರಸಾದ್ ಕೇರ್ಪಳ, ಲೋಕೇಶ್ ಗುಡ್ಡೆಮನೆ, ತೇಜೇಶ್ವರ ಕುಂದಲ್ಪಾಡಿ ಪದ್ಮನಾಭ ಮುಂಡೋಕಜೆ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ: ಡಾ. ಕುರುಂಜಿ ವೆಂಕಟ್ರಮಣ ಗೌಡರಿಗೆ ಶ್ರದ್ಧಾಂಜಲಿ ಸಭೆಯು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಧ್ಯಕ್ಷ ಎಂ. ವೆಂಕಪ್ಪ ಗೌಡರ ಅಧ್ಯಕ್ಷತೆಯಲ್ಲಿ ಜರಗಿತು.
ನಿಕಟಪೂರ್ವ ಅಧ್ಯಕ್ಷರಾದ ಭರತ್ ಮಂಡೋಡಿಯವರು ಕುರುಂಜಿಯವರು ಸುಳ್ಯಕ್ಕೆ ವ್ಯಕ್ತಿಯಾಗಿರಲಿಲ್ಲ, ಅವರೊಬ್ಬ ಶಕ್ತಿಯಾಗಿ ಸುಳ್ಯವನ್ನು, ನಮ್ಮ ಜಿಲ್ಲೆಯನ್ನು ಬೆಳಗಿದ್ದಾರೆ ಎಂದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್ ಸ್ವಾಗತಿಸಿ, ಕೆ. ಗೋಕುಲದಾಸ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.