ಸಂಪಾಜೆ- ಸುಳ್ಯ ರಸ್ತೆ ದುರವಸ್ಥೆ: ಅರಂತೋಡಿನಲ್ಲಿ ರಸ್ತೆ ತಡೆ
ಸುಳ್ಯ: ಸಂಪಾಜೆಯಿಂದ ಸುಳ್ಯದವರೆಗೆ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ರಸ್ತೆ ದುರಸ್ತಿಯನ್ನು ಕೂಡಲೆ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಅರಂತೋಡಿನಲ್ಲಿ ಶನಿವಾರ ಒಂದು ಗಂಟೆ ರಸ್ತೆತಡೆ ನಡೆಯಿತು.
ವಿದ್ಯಾರ್ಥಿಗಳು, ಊರಿನ ವಾಹನ ಚಾಲಕ, ಮಾಲೀಕರ ಸಂಘ ಹಾಗೂ ಸಾರ್ವಜನಿಕರು ರಸ್ತೆ ತಡೆಯಲ್ಲಿ ಪಾಲ್ಗೊಂಡಿದ್ದರು.
ತೊಡಿಕಾನ ಕ್ರಾಸ್ ಬಳಿ ನೂರಾರು ಮಂದಿ ರಸ್ತೆಯಲ್ಲಿ ಕುಳಿತರು. ಇದರಿಂದ ಎರಡೂ ಬದಿಗಳಲ್ಲೂ ವಾಹನದ ಸಾಲು ಬೆಳೆಯತೊಡಗಿತು.
ಸ್ವಲ್ಪ ಹೊತ್ತಿನಲ್ಲಿ ಸುಳ್ಯ ತಹಸೀಲ್ದಾರ್ ಟಿ.ಎಂ. ವೇಣುಗೋಪಾಲ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರಲ್ಲದೆ, ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು.
ವಾರದ ಗಡುವು: ಒಂದು ವಾರ ಗಡುವು ನೀಡುತ್ತೇವೆ. ಅದರೊಳಗೆ ರಸ್ತೆಯನ್ನು ಸಂಚಾರ ಯೋಗ್ಯ ಮಾಡದಿದ್ದರೆ ಇನ್ನಷ್ಟು ಉಗ್ರವಾಗಿ ಪ್ರತಿಭಟಿಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ತಹಸೀಲ್ದಾರ್ ಭರವಸೆಯ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಭವಾನಿಶಂಕರ ಅಡ್ತಲೆ, ಕಿಶೋರ್ ಕುಮಾರ್, ವಿನಯ ಬೆದ್ರುಪಣೆ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಎಚ್.ವಿ. ಸುದರ್ಶನ್ ನೇತೃತ್ವದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

