ಜಯಂತಿ ಎಸ್. ಬಂಗೇರಗೆ ತುಳುನಾಡ ತುಳುಶ್ರೀ ಪ್ರಶಸ್ತಿ
ಬಂಟ್ವಾಳ: ಆಲದಪದವು ಅಕ್ಷರ ಪ್ರತಿಷ್ಠಾನದಿಂದ ಕೊಡಮಾಡುವ 10ನೇ ವರ್ಷದ ತುಳುನಾಡ ತುಳು ಶ್ರೀ ಪ್ರಶಸ್ತಿಗೆ ತುಳು ಸಾಹಿತಿ, ನಾಟಕಗಾರ್ತಿ ಹಾಗೂ 'ಉಡಲ್' ತುಳು ಮಾಸಿಕ ಪತ್ರಿಕೆ ಸಂಪಾದಕಿ ಜಯಂತಿ ಎಸ್. ಬಂಗೇರ ಆಯ್ಕೆಯಾಗಿದ್ದಾರೆ.
ತುಳು ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿದ ಹಿರಿಯ ಸಾಧಕರನ್ನು ಗುರುತಿಸಿ ಪ್ರತಿವರ್ಷ ಪ್ರತಿಷ್ಠಾನದಿಂದ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ತುಳು ಸಾಹಿತ್ಯ ಕೃಷಿ ಸಾಧನೆಯನ್ನು ಗಮನಿಸಿ ಜಯಂತಿ ಎಸ್. ಬಂಗೇರ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. 12ರಂದು ಮೂಡುಪಡುಕೋಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ತುಳುನಾಡು ಮಟ್ಟದ 10ನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ರಾಮಕೃಷ್ಣ ಎಸ್. ಮತ್ತು ಕಾರ್ಯದರ್ಶಿ ಎಚ್.ಕೆ. ನಯನಾಡು ತಿಳಿಸಿದ್ದಾರೆ.
ತುಳು ಸಾಹಿತಿಯಾಗಿ, ನಾಟಕಗಾರ್ತಿಯಾಗಿ, ಪತ್ರಿಕಾ ಸಂಪಾದಕಿಯಾಗಿ ಗುರುತಿಸಿಕೊಂಡಿರುವ ಜಯಂತಿ ಎಸ್. ಬಂಗೇರ ಹಲವಾರು ನಾಟಕಗಳು, ಕಾದಂಬರಿಗಳು, 100ಕ್ಕೂ ಹೆಚ್ಚು ಸಣ್ಣಕತೆಗಳನ್ನು ಬರೆದಿದ್ದಾರೆ.
ಸಾಹಿತ್ಯ ಸಾಧನೆಗಾಗಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ರಾಣಿ ಅಬ್ಬಕ್ಕ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಸಹಿತ ಹಲವಾರು ಸಂಘಟನೆಗಳಿಂದ ಸನ್ಮಾನಕ್ಕೆ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

