ಕಟೀಲು: 25ರಂದು ಚಿನ್ನದ ರಥ ಸ್ವರ್ಣ ಮುಹೂರ್ತಕ್ಕೆ ಚಾಲನೆ
ಮೂಲ್ಕಿ: ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ರಾಜ್ಯದಲ್ಲೇ ಅತ್ಯಂತ ಎತ್ತರವಾದ ಚಿನ್ನದ ರಥದ ನಿರ್ಮಾಣ ಕಾರ್ಯ ನಡೆಯಲಿದ್ದು, ಸ್ವರ್ಣ ಮುಹೂರ್ತ 25ರಂದು ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಿನ್ನದ ರಥದ ಸ್ವರ್ಣ ಮುಹೂರ್ತಕ್ಕೆ ಚಾಲನೆ ನೀಡಲಿದ್ದಾರೆ. ಕಟೀಲು ದೇವಳದ ಭ್ರಾಮರಿಯ ಮೂಲಸ್ಥಾನ ಕುದ್ರುವಿನಲ್ಲಿ 2 ಕೋಟಿ ವೆಚ್ಚದಲ್ಲಿ ಕೆರೆಗಳ ನಿರ್ಮಾಣ, ಯಾಜ್ಞಕ ವೃಕ್ಷಗಳ ನೆಡುವಿಕೆ, ಮಾಡು ರಹಿತ ಗರ್ಭಗುಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಗರಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಸಲಿದ್ದಾರೆ. ಕಟೀಲು ದೇವಳದ ಆಡಳಿತ ಕಚೇರಿಯಲ್ಲಿ ಕಂಪ್ಯೂಟರ್ಗಳನ್ನು ಅಳವಡಿಸಲಾಗಿದ್ದು ಕಾಗದ ರಹಿತ ಕಚೇರಿಯ ಯೋಜನೆಯನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಯುವಜನ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಜೆ.ಆರ್. ಲೋಬೋ, ಬಿ.ಎ. ಮೈದಿನ್ ಬಾವಾ, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪಾಲ್ಗೊಳ್ಳಲಿದ್ದಾರೆ.
ಸಚಿವ ರಮಾನಾಥ ರೈ ಇಂದಿನ ಪ್ರವಾಸ
ಮಂಗಳೂರು: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆ.12ರಂದು ದ.ಕ ಜಿಲ್ಲೆಯ ವಿವಿಧ ಕಡೆಗಳ ಪ್ರವಾಸ ವಿವರ ಇಂತಿದೆ. ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ತೋಟಗಾರಿಕಾ ಮಿಷನ್ಯೋಜನೆಯ ರೈತರ ತರಬೇತಿ ಕಾರ್ಯಕ್ರಮ, 12ಕ್ಕೆ ಬಂಟ್ವಾಳ ಕೊಯಿಲ ಪ್ರೌಢಶಾಲೆಯಲ್ಲಿ ಆಟಿಡೊಂಜಿ ಕೂಟದಲ್ಲಿ ಭಾಗಿ, 1 ಗಂಟೆಗೆ ಮೂಡುಪಡಕೋಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ, 3ಕ್ಕೆ ಬಡಗಬೆಳ್ಳೂರು ಗ್ರಾಪಂಚಾಯ್ತಿಯ ಗ್ರಾಮೀಣ ಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಟೆಂಪೋ ಮಗುಚಿ ಐವರು ಗಂಭೀರ
ಮಂಗಳೂರು: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಪಲ್ಟಿಯಾಗಿ 22 ಮಂದಿ ಗಾಯಗೊಂಡಿದ್ದು, ಅದರಲ್ಲಿ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಗೋರಿಗುಡ್ಡದಿಂದ ವರದಿಯಾಗಿದೆ.
ಕಾಂಕ್ರಿಟ್ ಸ್ಲ್ಯಾಬ್ ನಿರ್ಮಾಣದ ಕಾರ್ಮಿಕರನ್ನು ಟೆಂಪೋದಲ್ಲಿ ಕರೆದೊಯ್ಯುತ್ತಿದ್ದಾಗ ಗೋರಿಗುಡ್ಡದ ನೆಕ್ಕರೆಮಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿತ್ತು. ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಐವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.
ಲಾರಿ ಡಿಕ್ಕಿ: ವಿದ್ಯುತ್ ಟ್ರಾನ್ಸ್ಫಾರ್ಮರ್ ಸಂಪೂರ್ಣ ಜಖಂ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಡಿಕ್ಕಿ ಹೊಡೆದ ಘಟನೆ ಮಾಣಿಲದಲ್ಲಿ ಶನಿವಾರ ಸಂಜೆ ನಡೆದಿದೆ. ಘಟನೆಯಿಂದ ಲಾರಿ ಹಾಗೂ ಟ್ರಾನ್ಸ್ಫಾರ್ಮರ್ ಸಂಪೂರ್ಣ ಜಖಂಗೊಂಡಿದೆ. ಮೆಸ್ಕಾಂಗೆ ರು. 1.5 ಲಕ್ಷ ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಎಂಜಿನಿಯರ್ ಆನಂದ ಎಂ. ವಿಟ್ಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

