ದಕ್ಷಿಣ ಕನ್ನಡ

ಕೊರಗ ಕುಟುಂಬಗಳಿಗೆ ಮನೆಗೆ ಒತ್ತಾಯಿಸಿ ಅನಿರ್ಧಿಷ್ಟ ಧರಣಿ

Published On :

ಮಂಗಳೂರು: ನಂತೂರಿನಲ್ಲಿ ಕಳೆದ 80 ವರ್ಷಗಳಿಂದ ವಾಸ ಮಾಡುತ್ತಿದ್ದ ಆರು ಕೊರಗ ಕುಟುಂಬಗಳು ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಮನೆ ಕಳೆದುಕೊಂಡಿದ್ದು, ಇಲ್ಲಿಯವರೆಗೆ ಸರ್ಕಾರದಿಂದ, ಜಿಲ್ಲಾಡಳಿತದಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಸಿಐಎಂ ನಗರ ಸಮಿತಿ ಕಾರ್ಯದರ್ಶಿ ವಸಂತ ಪೂಜಾರಿ ಹೇಳಿದ್ದಾರೆ.
ಕರ್ನಾಟಕ ಅನಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಹಕ್ಕುಗಳ ಸಮಿತಿ ವತಿಯಿಂದ ನಿರ್ವಸಿತ ಕೊರಗ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಆಗಿರುವ ಅನ್ಯಾಯ ವಿರೋಧಿಸಿ ಬಾಕಿಯಿರುವ ಬಾಡಿಗೆ ಮತ್ತು ತ್ವರಿತ ಭೂಮಂಜೂರಾತಿಗೆ ಒತ್ತಾಯಿಸಿ ಸೋಮವಾರ ಕೊಟ್ಟಾರ ಐಟಿಡಿಪಿ ಕಚೇರಿ ಮುಂಭಾಗ ನಡೆದ ಅನಿರ್ಧಿಷ್ಟಾವಧಿ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದರು.
ಈ ಹಿಂದೆ 2010ರಲ್ಲಿ ನಿವೇಶನಕ್ಕೆ ಆಗ್ರಹಿಸಿ ಪಾದಯಾತ್ರೆ ಮತ್ತು ಜಿಲ್ಲಾಡಳಿತದೆದುರು ಧರಣಿ ನಡೆಸಲಾಗಿತ್ತು. ಈ ಸಂದರ್ಭ ಜಿಲ್ಲಾಡಳಿತ ಸಭೆಯಲ್ಲಿ ಪರಿಹಾರ ಧನವಲ್ಲದೆ ಆರು ತಿಂಗಳಲ್ಲಿ ಸರಿಪಳ್ಳದಲ್ಲಿ ಪ್ರತಿ ಕುಟುಂಬಕ್ಕೆ 5 ಸೆಂಟ್ಸ್ ಜಾಗ ಮಂಜೂರಾತಿ ಹಾಗೂ ಮನೆ ನಿರ್ಮಾಣಕ್ಕೆ ಸಹಾಯಧನ ಒದಗಿಸುವ ಭರವಸೆ ನೀಡಿದ್ದರು. ಅಲ್ಲದೆ ಮುಂಗಡವಾಗಿ ರು. 2 ಸಾವಿರ ಬಾಡಿಗೆ ಮೊತ್ತವಾಗಿ ನೀಡಿತ್ತು. ಆದರೆ ಭೂ ಮಂಜೂರಾತಿಗೆ ಸರ್ಕಾರಕ್ಕೆ ಕಡತವನ್ನು ಜಿಲ್ಲಾಡಳಿತ ಸಲ್ಲಿಸಿದೇ ಹೊರತು ಇಲ್ಲಿಯವರೆಗೆ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು.
ಸಿಪಿಎಂ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ದಲಿತ ಹಕ್ಕುಗಳ ಸಮಿತಿ ಕಾರ್ಯದರ್ಶಿ ಲಿಂಗಪ್ಪ ನಂತೂರು, ರಾಜ್ಯ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಕಾರ್ಯದರ್ಶಿ ಜಯಕುಮಾರ್ ಕೋಡಿಕಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.