ದಕ್ಷಿಣ ಕನ್ನಡ

ಕಾರ್ಮಿಕರ ಕೊರತೆ- ಕೃಷಿ ಭೂಮಿ ಪಾಳು: ಪ್ರಮೋದ್

Published On :

ಉಡುಪಿ: ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರ ಕೊರತೆ ಇದ್ದು, ಕೃಷಿ ಭೂಮಿಯನ್ನು ಹಡೀಲು (ಪಾಳು) ಬಿಡುವುದಕ್ಕೆ ಇದು ಮುಖ್ಯ ಕಾರಣ. ಜೊತೆಗೆ ಭೂಮಿಯನ್ನು ಪಾಳು ಬಿಡುವುದು ಈಗೀಗ ಒಂದು ಫ್ಯಾಷನ್ ಆಗಿದೆ ಎಂದು ಶಾಸಕ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪಾಳು ಭೂಮಿ ಅಭಿವೃದ್ಧಿ ಯೋಜನೆ ಹಾಗೂ ಅನುದಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಾಳು ಭೂಮಿ ಅಭಿವೃದ್ಧಿ ಯೋಜನೆಯು ಉಡುಪಿಯಲ್ಲಿ ಒಂದು ಮಾದರಿ ಕಾರ್ಯಕ್ರಮವಾಗಿ ರೂಪಿತಗೊಳ್ಳುವುದರ ಜೊತೆಗೆ ಆಹಾರದ ಕೊರತೆ ನೀಗಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಅವರು ಹಾರೈಸಿದರು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಅಂತೋನಿ ಮರಿಯಾ ಇಮಾನ್ಯುವೆಲ್ ಎಂ. ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಸುಮಾರು 8 ಸಾವಿರ ಹೇಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸದೆ ಹಡೀಲು ಬಿಡಲಾಗಿದೆ. ಇದಕ್ಕೆ ಪ್ರಮುಖ ಕೃಷಿ ಕೂಲಿ ಆಳುಗಳ ಸಮಸ್ಯೆ, ಕೃಷಿಕರು ಯಾಂತ್ರೀಕರಣಕ್ಕೆ ಹೊಂದಿಕೊಳ್ಳದೇ ಇರುವುದು ಮತ್ತು ಅಧುನಿಕ ಕೃಷಿ ಪದ್ಧತಿಗಳ ಮಾಹಿತಿ ಕೊರತೆಯೇ ಕಾರಣ ಎಂದ ಅವರು ಹೇಳಿದರು.
ರಾಜ್ಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷ ದೇವದಾಸ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ದುಗ್ಗೆ ಗೌಡ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.