ದಕ್ಷಿಣ ಕನ್ನಡ

'ಸರ್ಕಾರಿ ಯೋಜನೆಗಳಿಗೆ ಜನಸ್ಪಂದನೆ ಅಗತ್ಯ'

Published On :

ಕಾರ್ಕಳ: ಗ್ರಾಮೀಣಾಭಿವೃದ್ಧಿಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಪ್ರಕಟಿಸಿದರೂ, ಜನರು ಅವುಗಳನ್ನು ಬಳಸಿಕೊಳ್ಳಲು ಆಸಕ್ತಿ ವಹಿಸಿದಾಗ ಮಾತ್ರ ಯಶಸ್ವಿಯಾಗುತ್ತವೆ. ಆದ್ದರಿಂದ ಸರ್ಕಾರದ ಯೋಜನೆಗಳಿಗೆ ಜನಸಾಮಾನ್ಯರ ಸ್ಪಂದನೆ ಅಗತ್ಯ ಎಂದು ಶಾಸಕ ವಿ. ಸುನಿಲ್ ಕುಮಾರ್ ನುಡಿದರು.
ಅವರು ಮಂಗಳವಾರ ಇಲ್ಲಿನ ಬೆಳ್ಮಣ್ಣು ಗ್ರಾಮದ ಮಿನಿ ವಿಧಾನಸೌಧದಲ್ಲಿ ಉಡುಪಿ ಜಿ.ಪಂ., ಕಾರ್ಕಳ ತಾಲೂಕು ಪಂಚಾಯಿತಿ ಬೆಳ್ಮಣ್ ಗ್ರಾ.ಪಂ.ಗಳ ಸಂಯುಕ್ತಾಶ್ರಯದಲ್ಲಿ ನಡೆದ ನಿರ್ಮಲ ಭಾರತ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳ್ಮಣ್ ಮಿನಿ ವಿಧಾನಸೌಧದ ಬಾಕಿ ಕಾಮಗಾರಿ ಪೂರ್ಣಗೊಳಿಸಲು ಶಾಸಕರ ಅನುದಾನದಿಂದ 15 ಲಕ್ಷ ನೀಡುವುದಾಗಿ ಶಾಸಕರು ಈ ಸಂದರ್ಭದಲ್ಲಿ ಘೋಷಿಸಿದರು.
ಜಿಪಂ ಅಧ್ಯಕ್ಷ ಬಿ. ಉಪೇಂದ್ರ ನಾಯಕ್ ಮಾತನಾಡಿ ಜಿಲ್ಲೆಯಲ್ಲಿ 27 ಸಾವಿರ ಶೌಚಾಲಯರಹಿತ ಮನೆಗಳಿದ್ದು, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಘಟನೆಗಳ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅವುಗಳನ್ನು ಪೂರ್ಣಗೊಳಿಸಲಾಗುವುದು. ಉಡುಪಿ ಜಿಲ್ಲೆಗೆ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದು, ನಿರ್ಮಲ ಭಾರತ ಅಭಿಯಾನದಡಿ ಸ್ವಚ್ಚ ಗ್ರಾಮ ಕಾರ್ಯಕ್ರಮ ಯಶಸ್ವಿಗೊಳಿಸಿ ಆ ಗೌರವವನ್ನು ಉಳಿಸಿಕೊಳ್ಳುವಲ್ಲಿ ಸಮಸ್ತ ನಾಗರಿಕರ ಸಹಕಾರ ಅಗತ್ಯ ಎಂದರು.
ಜಿ.ಪಂ. ಉಪ ಕಾರ್ಯದರ್ಶಿ ಡಿ. ಪ್ರಾಣೇಶ್ ರಾವ್, ಕಾರ್ಕಳ ತಾ.ಪಂ. ಅಧ್ಯಕ್ಷೆ ರಶ್ಮಿ ಶೆಟ್ಟಿ, ಜಿ.ಪಂ. ಸದಸ್ಯ ಸುಪ್ರೀತ್ ಶೆಟ್ಟಿ, ತಾ.ಪಂ. ಸದಸ್ಯ ಕ್ಸೇವಿಯರ್ ಡಿಮೆಲ್ಲೊ, ಗ್ರಾ.ಪಂ. ಅಧ್ಯಕ್ಷ ಶಂಕರ ಕುಂದರ್ ಸೂಡ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ತಿಮ್ಮಪ್ಪ, ಕಾರ್ಕಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಮೊಯ್ಲಿ, ಗ್ರಾಪಂ ಉಪಾಧ್ಯಕ್ಷೆ ಶ್ರೀಲತಾ ಉಪಸ್ಥಿತರಿದ್ದರು.
ಜಿ.ಪಂ. ಉಪವಿಭಾಗದ ಎಂಜಿನಿಯರ್ ಸತ್ಯೇಂದ್ರ, ಜಿಲ್ಲಾ ಸಂಯೋಜಕಿ ಮೀರಾ ಕುಮಾರಿ, ರಘುನಾಥ್  ಉಪಸ್ಥಿತರಿದ್ದರು. ಪಿಡಿಒ ಶೇಖರ ನಾಯ್ಕ್ ಸ್ವಾಗತಿಸಿದರು. ಹರಿದಾಸ ಭಟ್ ನಿರೂಪಿಸಿದರು. ಸಂಜೀವ ಕೆದಿಂಜೆ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.