ದಕ್ಷಿಣ ಕನ್ನಡ

ಭಾರತ ಭವಿಷ್ಯಕ್ಕೆ ಯುವಶಕ್ತಿ: ಡಾ.ಹೆಗ್ಗಡೆ

Published On :

ಮಂಗಳೂರು: ಸ್ವಾತಂತ್ರ್ಯ ಭಾರತವನ್ನು ಕಟ್ಟಿ ಬೆಳೆಸುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
 ಮೂಡುಬಿದಿರೆ ಆಳ್ವಾಸ್ ವಿದ್ಯಾಲಯದ ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ದಿನ ನಮ್ಮನ್ನು ಭಾರತೀಯರೆಂದು  ಗುರುತಿಸಿಕೊಳ್ಳುವ ದಿನ. ವಿವಿಧ ಜಾತಿ, ಭೇದ, ಭಾಷೆ ಮರೆತು ನಾವೆಲ್ಲ ಒಂದೇ ಎನ್ನುವ ಭಾವನೆ ಮೂಡಿಸುತ್ತದೆ. ಉತ್ತಮ ನಾಗರಿಕನಾಗುವ ಮೂಲಕ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡೋಣ ಎಂದು ಆಶಿಸಿದರು.
ಉತ್ತರ ಪ್ರದೇಶದ ನೆರೆಪೀಡಿತ ಜನರ ಸ್ಥಿತಿಯನ್ನು ಕಂಡು ಯಾರ ಮನ ಕರಗಿತೋ ಅವರೇ ನಿಜವಾದ ಭಾರತೀಯರು ಎಂದರು ಡಾ.ಹೆಗ್ಗಡೆ. ಆಳ್ವಾಸ್ ಶಿಕ್ಷಣ ಸಂಸ್ಥೆ ಕೇವಲ ಶಿಕ್ಷಣಕ್ಕೆ ಮಾತ್ರ ಮಹತ್ವ ಕೊಡುವುದಲ್ಲದೆ, ಕಲೆ, ಸಾಹಿತ್ಯ, ಕ್ರೀಡೆಗಳಿಗೂ ಸಮಾನ ಪ್ರಾಮುಖ್ಯತೆ ನೀಡುತ್ತಿದೆ ಎಂದರು.
ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ ಆಳ್ವ, 96ನೇ ಹುಟ್ಟುಹಬ್ಬ ಆಚರಿಸಿದ ಮಿಜಾರುಗುತ್ತು ಆನಂದ ಆಳ್ವ, ಮಾಜಿ ಸಚಿವ ಅಮರನಾಥ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ, ವಿನಯ್ ಆಳ್ವ ಇದ್ದರು.

20 ಸಾವಿರ ಮಂದಿಯ ಸೆಲ್ಯೂಟ್
ಆಳ್ವಾಸ್ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಒಟ್ಟು 20 ಸಾವಿರ ಮಂದಿ ಪಾಲ್ಗೊಂಡಿದ್ದರು. ಇದರಲ್ಲಿ ವಿದ್ಯಾರ್ಥಿಗಳು 17,900. ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದಲ್ಲಿ ಬಣ್ಣ ಬಣ್ಣದ ಬೆಲೂನ್‌ಗಳನ್ನು ಆಗಸಕ್ಕೆ ಹಾರಿಸಲಾಯಿತು.  ವಿಶೇಷವಾಗಿ ರಾಷ್ಟ್ರಧ್ವಜದ ಕೇಸರಿ, ಬಿಳಿ, ಹಸಿರು ಬಣ್ಣದ ಉಡುಪು ಧರಿಸಿದ ವಿದ್ಯಾರ್ಥಿಗಳು ಆಂಗ್ಲ ಭಾಷೆಯಲ್ಲಿ 'ಆಳ್ವಾಸ್‌' ಎಂಬ ಅಕ್ಷರವನ್ನು ರಚಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.