ಮಸೀದಿಗೆ ಕಲ್ಲೆಸೆದ ದುಷ್ಕರ್ಮಿಗಳು
ಮಂಗಳೂರು: ಕೊಣಾಜೆ ಮಸ್ಜಿದ್ಉಲ್ ಉಸ್ಲಾಂ ಸಲಬಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ. ಬುಧವಾರ ತಡರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಸೀದಿಗೆ ಕಲ್ಲೆಸೆದಿದ್ದಿದ್ದು ಗಾಜುಗಳು ಪುಡಿಯಾಗಿವೆ. ಆದರೆ ಬೈಕ್ ಸವಾರರು ಯಾರೆಂದು ತಿಳಿದುಬಂದಿಲ್ಲ. ಕತ್ತಲೆಯಲ್ಲಿ ಬೈಕ್ ಸ್ಟಾರ್ಟ್ ಮಾಡಿ ಅವರಿಬ್ಬರು ಪರಾರಿಯಾಗಿರುವುದನ್ನು ಮಾತ್ರ ನೋಡಿರುವುದಾಗಿ ಕೊಣಾಜೆಯ ಮೊಹಮ್ಮದ್ ಇಕ್ಬಾಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಮನೀಶ್ ಕರ್ಬೀಕರ್, ಎಸಿಪಿ ರವಿಕುಮಾರ್, ಇನ್ಸ್ಪೆಕ್ಟರ್ ಮದನ್ ಗವಾಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಳವು ಯತ್ನ: ಪೇದೆ ಬಂಧನ
ಮಂಗಳೂರು: ಪಿಲ್ಲಾರುಬಳಿ ವಕೀಲರ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕೆಎಸ್ಆರ್ಪಿ ಪೇದೆ ಕೊಡಗು ಮೂಲದ ವರುಣ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಪ್ರಕರಣ; ಇಬ್ಬರ ಸೆರೆ
ಮಂಗಳೂರು: ಮೊಗವೀರಪಟ್ಟಣದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಮತ್ತು ಶೇಖರ್ ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮೊಗವೀರಪಟ್ಟಣ ಮತ್ತು ಬಸ್ತಿಪಡ್ಪುವಿನಲ್ಲಿ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರ ವಿರುದ್ಧ ಎರಡು ಹಲ್ಲೆ ಪ್ರಕರಣಗಳು ದಾಖಲಾಗಿದ್ದವು. ಮೊಗವೀರಪಟ್ಟಣದ ನಾಸಿರ್ ಮತ್ತು ಅಶ್ಪಾಲ್ ಮಲ್ಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇವರಿಬ್ಬರನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

