ಗೋ ಕಳವು ತಡೆಯದಿದ್ದರೆ ಬಂದ್: ಮುತಾಲಿಕ್
ಮಂಗಳೂರು: ಜನರನ್ನು ಬೆದರಿಸಿ ಗೋ ಕಳ್ಳತನ ಮಾಡುತ್ತಿರುವವರ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ 15 ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ದ.ಕ. ಜಿಲ್ಲೆ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ 1964ರ ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸಿರುವುದೇ ಗೋ ಕಳ್ಳತನಕ್ಕೆ ಪ್ರಮುಖ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮನೆಯಿಂದ ಹೆಣ್ಣು ಮಕ್ಕಳನ್ನೂ ಕದ್ದೊಯ್ಯುವ ಸಾಧ್ಯತೆಯಿದೆ. ಆದ್ದರಿಂದ ಇವುಗಳ ವಿರುದ್ಧ ಸರ್ಕಾರ ಕೂಡಲೆ ಕ್ರಮ ಕೈಗೊಳ್ಳಬೇಕೆಂದರು.
ಭಾರತ್ ಬಚಾವೋ ಚಳುವಳಿ: ಬಾಂಗ್ಲಾ ದೇಶದ ಸುಮಾರು 10 ಲಕ್ಷ ನುಸುಳುಕೋರರು ದೇಶಕ್ಕೆ ಪ್ರವೇಶಿಸಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಕೊಂಡು ದೇಶವನ್ನು ಲೂಟಿ ಮಾಡುತ್ತಿದ್ದಾರೆ. ಇವರ ಬಗ್ಗೆ ಒಟ್ಟು ವರದಿಯನ್ನು ಸಂಗ್ರಹಿಸಿ ಒಂದೂವರೆ ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಕರ್ನಾಟಕದಲ್ಲಿ 3 ಸಾವಿರ ಬಾಂಗ್ಲಾ ಹುಡುಗಿಯರು ಬಾರ್, ಪಬ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವೇಶ್ಯಾವಾಟಿಕೆ, ಮಾದಕ ದ್ರವ್ಯ, ಖೋಟಾನೋಟು ಚಲಾವಣೆಗಳನ್ನು ಇವರಿಂದ ಮಾಡಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿಯೇ ಸುಮಾರು 20-25 ಸಾವಿರ ನುಸುಳುಕೋರರಿದ್ದಾರೆ. ಇವರಿರುವ ಸ್ಥಳದಲ್ಲಿಯೇ ಕೆಲವು ದಿನಗಳ ಹಿಂದೆ ಸ್ಫೋಟ ಸಂಭವಿಸಿತ್ತು. ಈ ಕುರಿತು ಶ್ರೀರಾಮ ಸೇನೆ ಸರ್ವೆ ನಡೆಸಿದ್ದು, ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಆದರೆ ಸರ್ಕಾರ ಈ ಮಾಹಿತಿಯನ್ನು ಕಡೆಗಣಿಸಿದೆ ಎಂದರು. ಒಂದು ತಿಂಗಳೊಳಗೆ ಬಾಂಗ್ಲಾ ನುಸುಳುಕೋರರನ್ನು ದೇಶದಿಂದ ಹೊರಗೆ ಹಾಕದಿದ್ದರೆ 'ಬಾಂಗ್ಲಾದೇಶ್ ಹಟಾವೋ-ಭಾರತ್ ಬಚಾವೋ' ಘೋಷಣೆಯಲ್ಲಿ ಆಂದೋಲನ ನಡೆಸಲಾಗುವುದು ಎಂದರು.
ಮೋದಿಗೆ ಬೆಂಬಲ: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮ ಸೇನೆ ತೀರ್ಮಾನಿಸಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಚಿಕ್ಕಮಗಳೂರು-ಉಡುಪಿ ಒಟ್ಟು 5 ಕ್ಷೇತ್ರಗಳಲ್ಲಿ ಸರ್ವೆ ನಡೆಸಲಾಗುತ್ತಿದೆ. ರಾಷ್ಟ್ರದ ಬಗ್ಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೃಷ್ಟಿಕೋನಕ್ಕೆ ಬೆಂಬಲವಾಗಿ ಲೋಕಸಭೆ ಚುನಾವಣಾ ಕಣಕ್ಕಳಿಯುತ್ತಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

